ಹುಬ್ಬಳ್ಳಿ : ಮಹಿಳೆಯೊಬ್ಬರು ಮನೆ ಕುಸಿದು ಗಾಯಗೊಂಡಿದ್ದು , ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ ಭೇಟಿ ಆರೋಗ್ಯ ವಿಚಾರಿಸಿದ್ದಾರೆ
ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವರು, ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದ್ದಾರೆ . ಕುಂದಗೋಳ ತಾಲ್ಲೂಕು ಯಲಿವಾಳ ಗ್ರಾಮದ ಕಾಶವ್ವ ( 62 ) ಮನೆ ಬಿದ್ದು ಗಾಯಗೊಂಡಿದ್ದು , ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಬಳಿಕ ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದ
ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ .