ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಖರ್ಗೆ, ಡಿಕೆಶಿ, ಪರಮೇಶ್ವರ್ ನಮ್ಮ ನಾಯಕರು ಎಂದ ಸಿದ್ದು ಪುತ್ರ ಡಾ. ಯತಿಂದ್ರ ಹೇಳಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಮೈಸೂರಿನಲ್ಲಿ ಶಾಸಕ ಡಾ. ಯತಿಂದ್ರ ತಿರುಗೇಟು ನೀಡಿದ್ದಾರೆ.
ಸಿದ್ದರಾಮೋತ್ಸವದ ಬಗ್ಗೆ ಕಾಮೆಂಟ್ ಮಾಡಿದ್ದ ಪ್ರಹ್ಲಾದ್ ಜೋಷಿಗೆ ಬಿಜೆಪಿಯವರು ಮೊದಲು ನಿಮ್ಮ ತೂತುಗಳನ್ನ ಮುಚ್ಚಿಕೊಳ್ಳಿ ಎಂದು ಯತಿಂದ್ರ ಟಾಂಗ್ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಡಾ. ಜಿ ಪರಮೇಶ್ವರ್ ನಮ್ಮ ನಾಯಕರು. ಅವರದೇ ಆದ ನಾಯಕತ್ವ ಹೊಂದಿದ್ದಾರೆ. ಯಾರನ್ನು ಯಾರು ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರ ಒಗ್ಗಟ್ಟು ಸಹಿಸದೆ ಬಿಜೆಪಿ ನಾಯಕರು ರಾಜ್ಯದ ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕೆಲ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದಾರೆ. ಮೊದಲು ಈ ಸಮಸ್ಯೆಗಳನ್ನ ಬಿಜೆಪಿ ನಾಯಕರುಗಳು ಸರಿಪಡಿಸಿಕೊಳ್ಳಲಿ ಡಾ. ಯತಿಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.