ಬೆಂಗಳೂರು.ಸೆ,2:
ಕರ್ನಾಟಕ ಲೋಕಸೇವಾ ಆಯೋಗ ಕೆಎಎಸ್ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಪಡಿಸಲು ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದಾರೆ.
ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಪ್ರಶ್ನೆಗಳ ಕುರಿತು ಸಾಕಷ್ಟು ಗೊಂದಲ ಉಂಟಾಗಿತ್ತು ಅರ್ಥವೇ ಇಲ್ಲದ ಕೆಲವು ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಪ್ರವೇಶಿಸಿ ಮರು ಪರೀಕ್ಷೆಗೆ ಆದೇಶಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.
ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ವಿಷಯದಲ್ಲಿಷಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ
ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.
Previous Articleಬೆಚ್ಚಿ ಬೀಳಿಸಿದ ಚಿರತೆ
Next Article ಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.

4 Comments
mgm sportsbook betmgm-play betmgm va
Revel in the harmony of balanced odds and fun. crowncoin guarantees harmonious gaming environments. Balance your bets and harmonize wins!