ಬೆಂಗಳೂರು,ಜೂ.11-
ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಾಗೂ ರಾಜ್ಯ ಸಚಿವ ಸಂಪುಟ ಪುನಾರಚನೆ ಮುತ್ತು ವಿಸ್ತರಣೆಯ ಯಾವುದೇ ಪ್ರಸ್ತಾಪ ಸದ್ಯಕ್ಕೆ ಹೈಕಮಾಂಡ್ ಮುಂದೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ ಈಗ ಆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದಾಗ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಧಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು,
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಹಾಗೂ ಜಾತಿ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಿದೆವು ಇದನ್ನು ಹೊರತುಪಡಿಸಿ ಬೇರೆ ಯಾವುದೇ ವಿಚಾರ ಚರ್ಚೆಗೆ ಬರಲಿಲ್ಲ ಎಂದು ಹೇಳಿದರು.
ಕಾಲ್ತುಳಿತದ ಘಟನೆ ಕಾಂಗ್ರೆಸ್ ಸೇರಿದಂತೆ ಎಲ್ಲರನ್ನು ಆಘಾತಕ್ಕೀಡುಮಾಡಿದೆ, ಹೀಗಾಗಬಾರದಿತ್ತು, ಇಂತಹ ಘಟನೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೂಚಿಸಿದ್ದೇವೆ ಎಂದರು,
Previous Articleಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.
Next Article ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
