ರಾಜ್ಯದ ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್ .ಪಾಟೀಲ್ ಅಧಿಕಾರ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಪ್ರಮಾಣ ವಚನ ಗೌಪ್ರತಾ ವಿಧಿ ಬೋಧಿಸಿದರು.
ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತರು ಕಡತಕ್ಕೆ ಸಹಿ ಹಾಕುವ ಮೂಲಕ ಅಧಿಕಾರ ಹಿಡಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಅರಗ ಜ್ಞಾನೇಂದ್ರ, ವಿ.ಸೋಮಣ್ಣ, ಹಾಲಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಈ ಹಿಂದೆ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಪಿ.ವಿಶ್ವನಾಥ್ ಶೆಟ್ಟಿ ಅವರು ಕಳೆದ ಜನವರಿ 27ರಂದು ಸೇವೆಯಿಂದ ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.
Previous Articleಅಭ್ಯರ್ಥಿಗಳ ಹಣೆಬರಹ ರಿವೀಲ್
Next Article ಅಕ್ರಮ ಸಂಬಂಧ: ವಿವಾಹಿತ ಪುರುಷ, ಯುವತಿಯ ಬೆತ್ತಲೆ ಮೆರವಣಿಗೆ