ಬೆಂಗಳೂರು. ಸೆ,14.- ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.ಇಲ್ಲಿಯವರೆಗೆ ಹಿಂದುಳಿದ ವಿಭಾಗಗಳ ಅಧ್ಯಕ್ಷರಾಗಿದ್ದ ಎಂ.ಡಿ.ಲಕ್ಷ್ಮೀನಾರಾಯಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಮಧು ಬಂಗಾರಪ್ಪ ಅವರನ್ನು ಎಐಸಿಸಿಯು ನೇಮಕ ಮಾಡಿದೆ.
ಎಐಸಿಸಿಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ನೇಮಕದ ಆದೇಶ ಹೊರಡಿಸಿದ್ದಾರೆ. ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಳೆದ 2021 ಜುಲೈನಲ್ಲಿ ಕಾಂಗ್ರೆಸ್ ಸೇರಿದ್ದರು.