Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್ ಸೋಂಕು ಪೀಡಿತರಿಗೆ ಕಡ್ಡಾಯ ರಜೆ
    ಸುದ್ದಿ

    ಕೋವಿಡ್ ಸೋಂಕು ಪೀಡಿತರಿಗೆ ಕಡ್ಡಾಯ ರಜೆ

    vartha chakraBy vartha chakraDecember 26, 202383 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.26 – ರಾಜ್ಯದ ಹಲವೆಡೆ ಸಾಂಕ್ರಾಮಿಕ ಕೋವಿಡ್ ವೈರಸ್ ಕಾಣಿಸಿಕೊಂಡಿದೆ.ಇದಕ್ಕೆ ಮುಂಜಾಗ್ರತೆಯೇ ಮದ್ದು ಎಂದು ಹೇಳಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋವಿಡ್ ಸೋಂಕಿಗೆ ಒಳಗಾದವರಿಗೆ ಸರ್ಕಾರ ಏಳು ದಿನ ಹೋಂ ಐಸೋಲೇಷನ್ ಕಡ್ಡಾಯ ಎಂದು ಹೇಳಿದ್ದಾರೆ.
    ಕೋವಿಡ್ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ ಅವರು,ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರ ತಳಿ ಜೆಎನ್.1 ಹೆಚ್ಚುತ್ತಿದೆಯಾದರೂ ಆತಂಕಪಡುವ ಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
    ಹೊಸ ವರ್ಷದ ಸಂಭ್ರಮಾಚರಣೆಗೆ ಅಡ್ಡಿಯಾಗುವ ರೀತಿಯಲ್ಲಿ ಯಾವುದೇ ನಿರ್ಬಂಧ ಹೇರುವುದಿಲ್ಲ. ತಜ್ಞರ ಸಲಹೆಯ ಮೇರೆಗೆ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.
    ಸಾರ್ವಜನಿಕರು ಜನದಟ್ಟಣಿಯಲ್ಲಿ ಸೇರದಂತೆ ತಮ್ಮನ್ನು ತಾವು ಸಾಧ್ಯವಾದಷ್ಟು ನಿರ್ಬಂಧ ಹೇರಿಕೊಳ್ಳಬೇಕು. ಜ್ವರ, ಕೆಮ್ಮು, ನೆಗಡಿ, ಶೀತ, ಗಂಟಲು ನೋವು ಬಂದರೆ,ವೈದ್ಯರ ಸಲಹೆ ಪಡೆದು ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕು.‌ಇದಕ್ಕೆ ಅನುಗುಣವಾಗಿ ಸೋಂಕು ಪೀಡಿತ‌ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಬೇಕು. ಖಾಸಗಿ ವಲಯಕ್ಕೂ ನಿಯಮ ಅನ್ವಯವಾಗುತ್ತದೆ, ಕಡ್ಡಾಯವಾಗಿ ಉದ್ಯೋಗಿಗಳಿಗೆ ಕೋವಿಡ್ ರಜೆ ನೀಡಬೇಕು ಎಂದರು.

    ಕೋವಿಡ್ ಲಕ್ಷಣಗಳಾದ, ಜ್ವರ, ಕೆಮ್ಮು ಮಕ್ಕಳಲ್ಲಿ ಕಂಡುಬಂದರೆ ಶಾಲೆಗೆ ಕಳುಹಿಸದೇ ಇರುವುದು ಉತ್ತಮ, ಮಕ್ಕಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನಿರ್ಬಂಧ ಹಾಕುವುದು ಉತ್ತಮ.
    ಹೊರಗೆ ಓಡಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶುಚಿತ್ವ ಕಾಪಾಡಿ, ಸ್ಯಾನಿಟೈಸರ್ ಬಳಸಿ ಎಂದರು.
    ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ 60 ಸ್ಯಾಂಪಲ್ಸ್ ನಲ್ಲಿ 34 ಜೆಎನ್.1 ಪ್ರಕರಣಗಳು ಪತ್ತೆಯಾಗಿವೆ.ಪರೀಕ್ಷೆ ಪ್ರಮಾಣ ಹೆಚ್ಚು ಮಾಡಿದಷ್ಟು‌ ಇದರ ಹರಡುವಿಕೆ ತಿಳಿಯುತ್ತದೆ ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ತಿಳಿಸಿದರು
    ಹಿಂದೆ ಆದ ತಪ್ಪು ಮರುಕಳಿಸಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ.
    ಆಕ್ಸಿಜನ್ ಕೊರತೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ.
    ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಫ್ಲೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಅಗತ್ಯ ಇರುವವರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಕೂಡ ನೀಡಲಾಗುವುದು. ಇದಕ್ಕಾಗಿ 30,000 ಡೋಸ್ ಕೋವಿಡ್ ಲಸಿಕೆ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದರು.
    ನಾಲ್ಕು ಆಮ್ಲಜನಕ ಸಂಚಾರಿ ಘಟಕಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಎಲ್ಲ ಆಸ್ಪತ್ರೆಗಳಲ್ಲಿ ಸನ್ನದ್ಧತೆ ಪರೀಕ್ಷಿಸಲಾಗುವುದು. ಕೋವಿಡ್ ವೈರಾಣುವಿನ ವಂಶವಾಹಿ ಸಂರಚನೆ ಪರೀಕ್ಷೆ ಹೆಚ್ಚಳಕ್ಕೂ ತೀರ್ಮಾನಿಸಲಾಗಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ 40 ಸಾವಿರ ಕೋಟಿ ಲೂಟಿ | Yediyurappa
    Next Article ಹೈಕಮಾಂಡ್ ಮುಂದೆ ಜಾರಕಿಹೊಳಿ ಇಟ್ಟ ಬೇಡಿಕೆ | Satish Jarkiholi
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ddslctp on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LeonardReawn on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Glennhof on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.