ಬೆಂಗಳೂರು,ಏ.13- ವಿಧಾನಸಭೆ Electionಯಲ್ಲಿ ಗೆಲ್ಲಲೇ ಬೇಕೆಂದು ರಣತಂತ್ರ ಆರೋಪಿಸಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾಡುತ್ತಿದ್ದಂತೆ ಬಂಡಾಯ ಬುಗಿಲಿದ್ದಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಇದರ ನೇರ ಲಾಭ ಜಾತ್ಯತೀತ ಜನತಾದಳಕ್ಕೆ ಲಭಿಸಿದೆ.
ಬಿಜೆಪಿಯ ಅನೇಕ ಟಿಕೆಟ್ ವಂಚಿತರು ಕಾಂಗ್ರೆಸ್ ಕದ ತಟ್ಟಿದರಾದರೂ ಆ ಪಕ್ಷ ಈಗಾಗಲೇ ಅಲ್ಲಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅನೇಕರು ಜೆಡಿಎಸ್ ಸೇರಿದ್ದಾರೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲದೆ ಸೊರಗಿದ್ದ ಜೆಡಿಎಸ್ಗೆ ಇದೀಗ ಅನೇಕ ಮಂದಿ ಮಾಜಿ ಶಾಸಕರು ಪಕ್ಷ ಸೇರುತ್ತಿರುವುದು ಆನೆ ಬಲ ಬಂದಂತಾಗಿದೆ ಮಾಜಿ ಪ್ರಧಾನಿ ದೇವೇಗೌಡ ಅವರ ಆಪ್ತರಾಗಿದ್ದು ಅನೇಕ ಕಾರಣಗಳಿಂದ ಕಡೂರಿನಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ದೊರೆಕದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ವೈ ಎಸ್ ವಿ ದತ್ತ ತಮ್ಮ ರಾಜಕೀಯ ಗುರು ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದು ಇದೀಗ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಈಗಾಗಲೇ ಮಾಜಿ ಶಾಸಕರಾದ ವೀರಭದ್ರಪ್ಪ ಹಾಲರವಿ, ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದಾರೆ. ಘೋಟ್ನೇಕರ್ ಅವರು ಹಳಿಯಾಳ ವಿಧಾನಸಭಾ ಕ್ಷೇತ್ರದಿಂದ ಮತ್ತು ವೀರಭದ್ರಪ್ಪ ಹಾವೇರಿ ಅವರು ಧಾರವಾಡ ದಕ್ಷಿಣ ಕ್ಷೇತ್ರದಿಂದ, ಮಲ್ಲಿಕಾರ್ಜುನ ಖೂಬಾ ಬಸವಕಲ್ಯಾಣದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲಿದ್ದಾರೆ.
ಕಾಂಗ್ರೆಸ್‍ನಿಂದ ಟಿಕಟ್ ವಂಚಿತರಾದ ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಜೆಡಿಎಸ್ ಸೇರಿದ್ದು, ಹಾನಗಲ್ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯರಘು ಆಚಾರ್ ಕಾಂಗ್ರೆಸ್ ತೊರೆದು ನಾಳೆ ಜೆಡಿಎಸ್ ಸೇರಲಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಸಿಗದಿರುವುದಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್ ಸೇರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅದೇ ರೀತಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಕೂಡ ಜೆಡಿಎಸ್‍ನತ್ತ ಮುಖ ಮಾಡಿದ್ದಾರೆ.