ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3, 2023 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ನೀಡಲಾಗುವುದು. ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08256 26644, ವಾಟ್ಸಾಪ್ 96634 64648 ಸಂಪರ್ಕಿಸಬಹುದು.


1 Comment
doctor recommended Mexican pharmacy: mexican pharmacy – generic medicine from Mexico