ಬೆಂಗಳೂರು – ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮಕ್ಕಳು ಅತ್ಯುತ್ಸಾಹದಿಂದ ಶಾಲೆಗಳಿಗೆ ಹೋಗುತ್ತಿದ್ದಾರೆ ಈ ನಡುವೆ ಖಾಸಗಿ ಶಾಲೆಗಳು ತಮ್ಮ ಶುಲ್ಕದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿವೆ.
ಕೋವಿಡ್ ಸಾಂಕ್ರಾಮಿಕ ಜಾಗತಿಕ ಆರ್ಥಿಕ ಹಿಂಜರಿತ ಸೇರಿದಂತೆ ಹಲವಾರು ಕಾರಣಗಳಿಂದ ಮೂರು ವರ್ಷಗಳ ಕಾಲ ಶಾಲಾ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಲಿಲ್ಲ ಇದರ ಜೊತೆಗೆ ಶಿಕ್ಷಕರ ಮತ್ತು ಇತರ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡಲಾಗಿದೆ ಇದರಿಂದ ಶಿಕ್ಷಣ ಸಂಸ್ಥೆಗಳು ತೀವ್ರ ನಷ್ಟ ಅನುಭವಿಸುತ್ತಿದ್ದು ಇದನ್ನು ಭರಿಸಲು ಶುಲ್ಕ ಹೆಚ್ಚಳ ಅನಿವಾರ್ಯ ಎಂಬ ಸ್ಪಷ್ಟನೆ ನೀಡುತ್ತಿವೆ.
ಹೆಚ್ಚಳಗೊಂಡಿರುವ ಶುಲ್ಕವನ್ನು ಪಾವತಿಸಲಾಗಿದೆ ಪೋಷಕರು ಪರದಾಡುವಂತಾಗಿದೆ ಕೆಲವೆಡೆ ಶಾಲೆಗಳು ಕಂತುಗಳು ರೂಪದಲ್ಲಿ ಶುಲ್ಕ ಪಾವತಿಗೆ ಅವಕಾಶ ನೀಡಿವೆ. ಆದರೆ ಕೆಲವು ಸಂಸ್ಥೆಗಳು ಮಾತ್ರ ಶುಲ್ಕ ಪಾವತಿಸಿದರೆ ಮಾತ್ರ ಶಾಲೆಗೆ ಪ್ರವೇಶ ಎಂಬ ನಿಯಮ ಕಟ್ಟುನಿಟ್ಟಾಗಿಪಾಲಿಸುವ ಮೂಲಕ ಶುಲ್ಕ ಪಾವತಿಸಲಾಗದ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಲು ನಿರಾಕರಿಸುತ್ತಿವೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ. ಮಹದೇವಪ್ಪ ಕಟ್ಟು ನಿಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.
ಶುಲ್ಕದ ಕಾರಣಕ್ಕೆ ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು ಶಿಕ್ಷಣ ಎನ್ನುವುದು ಪ್ರಾಥಮಿಕವಾದ ಹಕ್ಕಾಗಿದ್ದು ಶುಲ್ಕದ ನೆಪವೊಡ್ಡಿ ಯಾವುದೇ ವಿದ್ಯಾರ್ಥಿಗೂ ಶಿಕ್ಷಣದ ಸೌಲಭ್ಯವನ್ನು ವಂಚಿಸುವಂತಿಲ್ಲ’ ಎಂದು ಹೇಳಿದ್ದಾರೆ.
ಕಳೆದ ಸರ್ಕಾರದ ಅವಧಿಯಲ್ಲಿ ಬಡ ಮಕ್ಕಳು ಶುಲ್ಕ ಪಾವತಿಸದೇ ಇದ್ದರೆ ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅಡ್ಡಿಪಡಿಸಲಾಗುತ್ತಿತ್ತು. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ
‘ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡದೇ ತಮ್ಮದೇ ದುರಾಡಳಿತದ ಗೋಜಲಿನಲ್ಲಿ ಮುಳುಗಿದ್ದ ಈ ಹಿಂದಿನ ಸರ್ಕಾರದ ಅರಾಜಕತೆಯನ್ನು ಖಂಡಿಸುತ್ತಾ, ಎಲ್ಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿವೇತನ ಸಿಗುವಂತೆ ಶಿಸ್ತುಬದ್ಧವಾಗಿ ಕ್ರಮ ಕೈಗೊಂಡು ಎಲ್ಲಾ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು’ ಎಂದಿದ್ದಾರೆ.
Previous ArticleDating App ಮೂಲಕ ವಂಚನೆ
Next Article ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ