ಮಂಗಳೂರು: ಜಿಲ್ಲಾಡಳಿತ, ಜಿ.ಪಂ., ಮಂಗಳೂರು ತಾ.ಪಂ., ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗು ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆ ಹಮ್ಮಿಕೊಳ್ಳಲಾಗಿದ್ದ ಹರ್ ಘರ್ ತಿರಂಗ ಅಭಿಯಾನದಡಿ ತನ್ಮಯಿ ಸಂಜೀವಿನಿ, ಗ್ರಾ.ಪಂ. ಒಕ್ಕೂಟ, ರಾಯಿ ಗ್ರಾ.ಪಂ. ಸದಸ್ಯರು ತಯಾರಿಸಿದ ರಾಷ್ಟ್ರ ದ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಿದರು.
ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಶಾಸಕ ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.