ಕೊಪ್ಪಳ: ಮಹಿಳೆಯರು ಮತ್ತು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯ ಸಿಂಧನೂರು ತಾಲೂಕಿನ ಸಿಂಗಾಪುರ ಗ್ರಾಮದ ಶಾಲೆಯ ಶಿಕ್ಷಕ ಮೊಹಮ್ಮದ್ ಅಜರುದ್ದೀನ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಈ ಶಿಕ್ಷಕ ಮಕ್ಕಳ ಗುಪ್ತಾಂಗ ಅಳೆಯುವ ಚಟ ಹೊಂದಿದ್ದ ಎಂದು ಆರೋಪಿಸಲಾಗಿದೆ.
ಶಿಕ್ಷಕನ ಈ ಅಸಭ್ಯ ವರ್ತನೆಯ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ತನಿಖೆ ನಡೆಸಿದ ಶಿಕ್ಷಣ ಇಲಾಖೆ ಅಮಾನತು ಆದೇಶ ಹೊರಡಿಸಿದೆ. ರಾಯಚೂರು ಡಿಡಿಪಿಐ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಶಿಕ್ಷಕನ ಅಸಭ್ಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
Previous Articleದೇಶದಲ್ಲಿ ಕೊರೋನಾ ಏರುಮುಖ: 17,092 ಜನರಿಗೆ ಸೋಂಕು, 29 ಜೀವಹಾನಿ
Next Article ಚಿನ್ನ ಬಲು ದುಬಾರಿ: 10 ಗ್ರಾಮ್ಗೆ 1,310 ರೂ. ಹೆಚ್ಚಳ