Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರಲ್ಲಿ ಮೋದಿ ಯೋಗಾಯೋಗ
    ಸುದ್ದಿ

    ಮೈಸೂರಲ್ಲಿ ಮೋದಿ ಯೋಗಾಯೋಗ

    vartha chakraBy vartha chakraJune 21, 2022Updated:June 21, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸಹ್ರಸಾರು ಮಂದಿ ಸಮ್ಮುಖದಲ್ಲಿ ಯೋಗ ಮಾಡಿ ಗಮನ ಸೆಳೆದ ಪ್ರಧಾನಿ

    ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನದ ಶುಭಾಶಯಗಳು. ಯೋಗದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ಪ್ರಣಾಮ ಮಾಡುತ್ತೇನೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾತುಗಳನ್ನು ಶುರು ಮಾಡಿದರು.

    ಮೈಸೂರಿನಲ್ಲಿ ಪ್ರಧಾನಿ ಮೋದಿ ಮಾತುಭಾರತವು ಸದಾ ವಿಶ್ವದ ಒಳಿತು ಬಯಸುತ್ತೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. ಮಾನವತೆಗೆ ಯೋಗ ಎನ್ನುವುದು ಈ ವರ್ಷದ ಆಶಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ ಅಷ್ಟೇ ಅಲ್ಲ ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

    ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ನಡೆಯುತ್ತಿದೆ. ಇವು ಭಾರತದ ಇತಿಹಾಸ ಮತ್ತು ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.

    ವಿಶ್ವದ ವಿವಿಧೆಡೆ ಸೂರ್ಯರಶ್ಮಿ ಸ್ಪರ್ಶವಾಗುವ ಹೊತ್ತಿಗೆ ಯೋಗದಿನದ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯೋಗವು ವಿಶ್ವಮಟ್ಟದಲ್ಲಿ ಗಾರ್ಡಿಯನ್ ರಿಂಗ್ ಆಫ್ ಯೋಗ ಹೆಸರಿನಲ್ಲಿ ಜನಜನಿತವಾಗಿದೆ. ಯೋಗ ಎನ್ನುವುದು ಕೇವಲ ಜೀವನದ ಭಾಗ ಅಲ್ಲ. ಅದು ಜೀವನದ ರೀತಿ ಆಗುತ್ತಿದೆ ಎಂದು ಮೋದಿ ಹೇಳಿದರು.

    ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸ – ಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್​ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

    ಮೂರು ಬಾರಿ ಓಂಕಾರ ಉಚ್ಚಾರಣೆಯೊಂದಿಗೆ ಯೋಗದಿನದ ಪ್ರಯುಕ್ತ ನಡೆಯುತ್ತಿರುವ ವಿಶೇಷ ಯೋಗಾಭ್ಯಾಸ ಆರಂಭವಾಯಿತು. ಸಂಸ್ಕೃತದ ಶ್ಲೋಕವೊಂದರ ಮೂಲಕ ಪ್ರಾರ್ಥನೆ ಮಾಡಲಾಯಿತು

    ಯೋಗ ದಿನದ ಸ್ವಾಗತ ಭಾಷಣ ಮಾಡಿದ ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಮೈಸೂರಿನ ಗುಣಗಾನ ನಡೆಸಿದ್ದಾರೆ. ಅಲ್ಲದೇ ಯೋಗ ದಿನದ ಮಹತ್ವ ಸಾರಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ಮಾಡಿದ್ದು, ಈ ದಿನಕ್ಕೆ ಶುಭಕೋರಿದ್ದಾರೆ.

    News
    Share. Facebook Twitter Pinterest LinkedIn Tumblr Email WhatsApp
    Previous Articleತೂತುಮಡಿಕೆ ಟ್ರೈಲರ್
    Next Article ಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vodoponijenie_mqPr on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • vodoponijenie_ruPr on ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • vodoponijenie_ouPr on ಸ್ನಾನದ ಮನೆಯಲ್ಲಿ ಶವವಾದಳು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe