ನವದೆಹಲಿ: ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ ಹಲವೆಡೆ ಶುಕ್ರವಾರ ಪ್ರತಿಭಟನೆ ನಡೆಯಿತು.
ಶುಕ್ರವಾರದ ಪ್ರಾರ್ಥನೆಯ ಬಳಿಕ ದೆಹಲಿಯ ಜಾಮಾ ಮಸೀದಿಯ ಹೊರಗೆ ಪ್ರತಿಭಟನೆ ನಡೆದಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಕೋಲ್ಕತ್ತ ಹಾಗೂ ಹೈದರಾಬಾದ್‌ನಲ್ಲೂ ಜನರು ರಸ್ತೆಗಿಳಿದು ಪ್ರತಿಭಟಿಸಿದ್ದಾರೆ.
ಈಗಾಗಲೇ ಬಿಜೆಪಿಯಿಂದ ಅಮಾನತುಗೊಂಡಿರುವ ಪಕ್ಷದ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಮತ್ತು ಉಚ್ಚಾಟನೆಗೊಂಡಿರುವ ನವೀನ್ ಜಿಂದಾಲ್ ಅವರು ಪ್ರವಾದಿ ಮಹಮ್ಮದ್ ಕುರಿತು ಆಡಿರುವ ಅವಹೇಳನಕಾರಿ ಮಾತುಗಳನ್ನು ತೀವ್ರವಾಗಿ ಖಂಡಿಸಿರುವ ಮುಸ್ಲಿಂ ಸಮುದಾಯ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗೆ ಮುಂದಾಗಿದೆ.
ಕೋಲ್ಕತ್ತದಲ್ಲಿ ಸುಮಾರು 300 ಜನರು ನಮಾಜ್ ಬಳಿಕ ಭಿತ್ತಿಪತ್ರಗಳನ್ನು ಹಿಡಿದು ನೂಪುರ್ ಬಂಧನಕ್ಕೆ ಆಗ್ರಹಿಸಿದ್ದಾರೆ. ಮಹಾರಾಷ್ಟ್ರದ ಸೋಲಾಪುರದಲ್ಲಿ ಜನರು ಪ್ರತಿಭಟನಾ ರ್‍ಯಾಲಿ ನಡೆಸಿದರು.
ಪ್ರವಾದಿ ಮಹಮ್ಮದ್ ಅವಹೇಳನ: ದೇಶದ ಹಲವೆಡೆ ಮುಸ್ಲಿಮರ ಪ್ರತಿಭಟನೆ
Previous ArticleCM ಕೆಸಿಆರ್ ಅವಹೇಳನ: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಬಂಧನ
Next Article ಮುಷರಫ್ ಸಾವು: ಗೊಂದಲಕ್ಕೆ ಕಾರಣವಾದ ಪಾಕ್ ಮಾಧ್ಯಮಗಳ ವರದಿ