Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಗಲ್ ಪ್ರೇಮಿಯ ಕಾಟಕ್ಕೆ ಬಲಿಯಾದ ದಂತವೈದ್ಯೆ
    Bengaluru

    ಪಾಗಲ್ ಪ್ರೇಮಿಯ ಕಾಟಕ್ಕೆ ಬಲಿಯಾದ ದಂತವೈದ್ಯೆ

    vartha chakraBy vartha chakraFebruary 2, 2023Updated:March 20, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.2-
    ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ತಮ್ಮ ಅಮೂಲ್ಯ ಜೀವವನ್ನು ಕಳೆದುಕೊಂಡಿರುವ ದಾರುಣ ಘಟನೆ ಸಂಜಯನಗರದಲ್ಲಿ ನಡೆದಿದೆ. ಎಂ.ಎಸ್ ರಾಮಯ್ಯ (MS Ramaiah) ಆಸ್ಪತ್ರೆಯಲ್ಲಿ ದಂತ ವ್ಯೆದ್ಯೆಯಾಗಿ ಕೆಲಸ ಮಾಡುತ್ತಿರುವ ಉತ್ತರಪ್ರದೇಶದ ಲಖನೌ ಮೂಲದ ದಂತವ್ಯೆದ್ಯೆ ಪ್ರಿಯಾಂಶಿ ತ್ರಿಪಾಠಿ (28) ಪಾಗಲ್ ಪ್ರೇಮಿಯ ಕಾಟದಿಂದ ಬೇಸತ್ತು ಜನವರಿ 25 ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯ ಸುಮಿತ್ ಎಂಬಾತ ಪ್ರಿಯಾಂಶಿಗೆ ಪ್ರೇಮ ನಿವೇದನೆ ಮಾಡಿದ್ದ. ಆದರೆ, ಇದಕ್ಕೆ ಆಕೆ ಒಪ್ಪಿಲಿಲ್ಲ. ಇಷ್ಟಕ್ಕೇ ಸುಮ್ಮನಾಗದ ಸುಮಿತ್, ವಿವಾಹವಾಗುವಂತೆ ಯಾವಾಗಲೂ ಒತ್ತಾಯ ಮಾಡುತ್ತಿದ್ದ. ಅಲ್ಲದೆ, ಹಣಕ್ಕಾಗಿ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.

    ಮದ್ಯ ಸೇವನೆ ಮತ್ತು ಸಿಗರೇಟ್ ಸೇದುವಂತೆ ಪ್ರಿಯಾಂಶಿಗೆ ಒತ್ತಾಯ ಮಾಡುತ್ತಿದ್ದ ಸುಮಿತ್, ಆಕೆಯ ನಡತೆಯ ಬಗ್ಗೆ ಆಸ್ಪತ್ರೆಯಲ್ಲೆಲ್ಲ ಸುಳ್ಳು ಹೇಳಿದ್ದ. ಆಕೆ ಸರಿಯಿಲ್ಲ. ಆಕೆಯನ್ನು ಯಾರೂ ಮದುವೆ ಆಗಲ್ಲ ಎಂದು ನಿಂದಿಸಿದ್ದ. ಸುಮಿತ್ ಕಾಟವನ್ನು ತಡೆಯದೇ ಪ್ರಿಯಾಂಶಿ ಮನೆಯವರಿಗೆ ವಿಷಯ ತಿಳಿಸಿದ್ದರು. ‘ನನ್ನನ್ನು ವಾಪಸ್ ಲಖನೌಗೆ ಕರೆದುಕೊಂಡು ಹೋಗಿ, ನನ್ನನ್ನು ಸುಮಿತ್ ಬದುಕಲು ಬಿಡುತ್ತಿಲ್ಲ’ ಎಂದು ಹೇಳಿದ್ದರು. ಆದರೆ, ಪ್ರಿಯಾಂಶಿ ಪಾಲಕರು ಸುಮಿತ್ಗೆ ಬುದ್ಧಿಮಾತು ಹೇಳಿದ್ದರು. ಅಲ್ಲದೆ, ಆತನ ತಂದೆಗೆ ಕರೆ ಮಾಡಿ ಮಗನ ಬಗ್ಗೆ ದೂರು ನೀಡಿ, ತಮ್ಮ ಮಗಳ ವಿಚಾರಕ್ಕೆ ಬರದಿರುವಂತೆ ತಿಳಿಹೇಳಿ ಎಂದಿದ್ದರು.
    ಇಷ್ಟೆಲ್ಲ ಆದರೂ ಬುದ್ಧಿ ಕಲಿಯದ ಸುಮಿತ್, ಮತ್ತೆ ಪ್ರಿಯಾಂಶಿಗೆ ತೊಂದರೆ ಕೊಡಲು ಆರಂಭಿಸಿದ್ದ. ಆಕೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದ. ಇದರಿಂದ ಮನನೊಂದ ಪ್ರಿಯಾಂಶಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕಳೆದ ಜ.24ರ ಬೆಳಗ್ಗೆ ಪ್ರಿಯಾಂಶಿ ತಾಯಿ ಆಕೆಗೆ ಕರೆ ಮಾಡಿದ್ದಾರೆ. ಆದರೆ, ಎಷ್ಟು ಬಾರಿ ರಿಂಗ್ ಆದರೂ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಾಬರಿಗೊಂಡ ಪ್ರಿಯಾಂಶಿ ತಾಯಿ, ಮಗಳು ವಾಸವಿದ್ದ ಮನೆಯ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ತಕ್ಷಣ ಮಾಲೀಕರು ಮನೆಯ ಬಳಿ ಹೋಗಿ ನೋಡಿದಾಗ ಪ್ರಿಯಾಂಶಿ ಒಳಗಡೆಯಿಂದ ಲಾಕ್ ಮಾಡಿರುವುದು ಕಂಡುಬಂದಿದೆ. ತಕ್ಷಣ ಮಾಲೀಕರು ಸಂಜಯನಗರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಅದೇ ದಿನ ಸಂಜೆ 5 ಗಂಟೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಗೆ ಬಾಗಿಲು ತೆರೆದು ನೋಡಿದಾಗ ಪ್ರಿಯಾಂಶಿ ನೇಣು ಬಿಗಿದುಕೊಂಡಿರುವುದು ಬಯಲಾಗಿದೆ. ಈ ಸಂಬಂಧ ಪ್ರಿಯಾಂಶಿ ತಂದೆ ಸುಶೀಲ್ ತ್ರಿಪಾಠಿ ಅವರು ವೈದ್ಯ ಸುಮಿತ್ ವಿರುದ್ಧ ದೂರು ದಾಖಲಿಸಿದ್ದಾರೆ. ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿದ್ದೇ ಮಗಳ ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ಪ್ರಿಯಾಂಶಿ ತಂದೆ ಉಲ್ಲೇಖಿಸಿದ್ದಾರೆ. IPC ಸೆಕ್ಷನ್ 306 ಅಡಿಯಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    #Suicide Bangalore crime dentist m ms ramaiah ಅಪರಾಧ ಸುದ್ದಿ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Article1000 ಕೋಟಿಗೆ ಕೆಲವೇ ಹೆಜ್ಜೆಗಳ ದೂರದಲ್ಲಿರುವ Pathaan!
    Next Article ಅದಾನಿ ಹಗರಣಕ್ಕೆ ಸಂಸತ್ ಕಲಾಪ ಬಲಿ
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fcjjui on ಚಿನ್ನ ಕಳ್ಳಸಾಗಣೆ ಮಾಡಿದ ಸಿನಿಮಾ ನಟಿ.
    • Ntcvgq on ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ
    • LeonardReawn on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.