Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ
    ಸುದ್ದಿ

    ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ

    vartha chakraBy vartha chakraJanuary 31, 202327 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru
    ಲೈಂಗಿಕ ಹಗರಣದ ಸುಳಿಗೆ ಸಿಲುಕಿದ ಮುರುಘಾ ಶರಣರು ಜೈಲು ಪಾಲಾಗುತ್ತಿದ್ದಂತೆ ಮುರುಘಾಮಠಕ್ಕೆ ಇನ್ನಿಲ್ಲದಂತೆ ಗ್ರಹಚಾರಗಳು ಕಾಡತೊಡಗಿವೆ. ಮಠದ ಹೆಸರಿನಲ್ಲಿ ನಡೆದಿರುವ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ಬೃಹನ್ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವೇಶ್ವರ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ರಾಜ್ಯ ಸರ್ಕಾರ ಕಾಲಕಾಲಕ್ಕೆ ನೀಡಿರುವ ಕೋಟ್ಯಂತರ ರೂಪಾಯಿಗಳ ಅನುದಾನದ ಸಂಪೂರ್ಣ ಮಾಹಿತಿ ಒದಗಿಸಬೇಕು ಮತ್ತು ಈ ಅನುದಾನ ನೀಡುವಾಗ ಏನಾದರೂ ಷರತ್ತುಗಳನ್ನು ವಿಧಿಸಲಾಗಿತ್ತೇ ಎಂಬುದನ್ನು ತಿಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

    ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ SJM ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿತ್ತು.
    ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಮುರುಘಾಮಠಕ್ಕೆ ನೂರಾರು ವರ್ಷಗಳ ವೈಭವೋಪೇತ ಇತಿಹಾಸವಿದೆ. ಆದರೆ, ದುರದೃಷ್ಟವಶಾತ್‌ ಈಗಿನ ಪೀಠಾಧಿಪತಿ ಮುರುಘಾ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಠಕ್ಕೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹಾಗೂ ನೂರಾರು ವಿದ್ಯಾಸಂಸ್ಥೆಗಳ ದೈನಂದಿನ ಆಡಳಿತಕ್ಕೆ ವ್ಯತ್ಯಯ ಉಂಟಾಗಬಾರದು ಎಂಬ ಏಕೈಕ ಕಾರಣಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ’ ಎಂದು ಸರ್ಕಾರದ ನಿಲುವನ್ನು ಬಲವಾಗಿ ಸಮರ್ಥಿಸಿದರು.

    ‘ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ಸರ್ಕಾರವು ಕಾಲಕಾಲಕ್ಕೆ ಕೋಟ್ಯಂತರ ರೂಪಾಯಿಗಳ ಬೃಹತ್‌ ಅನುದಾನ ನೀಡುತ್ತಾ ಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ 2022 ರ ಸೆಪ್ಟೆಂಬರ್ 15 ರಂದು ಸರ್ಕಾರ 10 ಕೋಟಿ ರೂ. ಗಳನ್ನು ನೀಡಿದೆ. ಇದಕ್ಕೂ ಮುನ್ನ ಸಾಕಷ್ಟು ಆರ್ಥಿಕ ನೆರವು ಒದಗಿಸಲಾಗಿದೆ. ಈ ಕುರಿತ ಎಲ್ಲ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಲಾಗುವುದು’ ಎಂದರು.
    ‘ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಆರ್ಥಿಕ ನೆರವಿನ ಅಂಶಗಳೂ ಅಡಗಿವೆ ಎಂಬುದನ್ನು ನ್ಯಾಯಪೀಠ ಪರಿಗಣಿಸಬೇಕು. ಅಂತೆಯೇ, ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ ಮುಖ್ಯಮಂತ್ರಿಗಳು ಸ್ವತಃ ನೂರು ಬಾರಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ಮಠದ ಆಸ್ತಿ ಸಂರಕ್ಷಣೆ ಮತ್ತು ಭಕ್ತರ ಹಿತಾಸಕ್ತಿ ಕಾಪಾಡುವ ಉದ್ದೇಶ ಅಡಗಿದೆ. ಮಠದ ಜೊತೆಗೆ ಸಂಘರ್ಷಕ್ಕಿಳಿಯುವ ಅಥವಾ ವ್ಯಾಜ್ಯ ಮಾಡುವ ಧೋರಣೆಯಿಲ್ಲ’ ಎಂದು ಸ್ಪಷ್ಟಪಡಿಸಿದರು.

    ಆಡಳಿತಾಧಿಕಾರಿ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರಿಗೆ ಫೆಬ್ರುವರಿ 2 ರಂದು ವಾದ ಮಂಡಿಸಲು ಅವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

    m murugha matha News ಅಪರಾಧ ಸುದ್ದಿ ಕಾನೂನು ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಣಾಯಕ ಸ್ಥಿತಿಯಲ್ಲಿದೆ ತಾರಕ ರತ್ನ ಅವರ ಆರೋಗ್ಯ
    Next Article ಚಿನ್ನದಂಗಡಿಗಳಿಗೆ IT shock!
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe