Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News
    Trending

    ಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News

    vartha chakraBy vartha chakraOctober 21, 2023214 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ 21- ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದೃಷ್ಠಿಯಿಂದ ದ್ವೇಷಕ್ಕೆ ಕಾರಣವಾಗುವ ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಹುತಾತ್ಮ ಪೊಲೀಸರಿಗೆ ಪುಷ್ಪ ನಮನ ಸಲ್ಲಿಸಿಮಾತನಾಡಿದ ಅವರು ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಅಭಿವೃದ್ಧಿಗೆ ಮಾರಕವಾಗಿವೆ ಇದರಿಂದ ಸೃಷ್ಟಿಯಾಗುವ ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ.ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದ್ದು ಇದರ ವಿರುದ್ಧ ವಿಶೇಷ ವಿಭಾಗ ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
    ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

    ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು.
    ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

    ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ.
    ವಸತಿ ಗೃಹ ನಿರ್ಮಾಣ:
    2125  ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ.

    ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದರು.
    189 ಮಂದಿ‌ ಪೊಲೀಸ್ ಹುತಾತ್ಮ:
    ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದ್ದು,ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ.
    ದೇಶದಲ್ಲಿ ಕಳೆದ ಸೆಪ್ಟೆಂಬರ್ 22ರಿಂದ ಆಗಸ್ಟ್ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.

    ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್,ಡಿಜಿಪಿಗಳಾದ ಕಮಲ್ ಪಂತ್ ,ಪ್ರತಾಪ್ ರೆಡ್ಡಿ,ಗುಪ್ತದಳದ ನಿರ್ದೇಶಕ ಶರತ್ ಚಂದ್ರ ನಗರ ಪೊಲೀಸ್ ಆಯುಕ್ತ ದಯಾನಂದ, ಸೇರಿ ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.

    Bangalore bangalore news News ಆರೋಗ್ಯ ಕಾನೂನು ತಂತ್ರಜ್ಞಾನ ರಾಜಕೀಯ ಶಾಲೆ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    Next Article ವಿದ್ಯುತ್ ಖರೀದಿ ಹೆಸರಲ್ಲಿ ಕಮೀಷನ್ ಹೊಡೆಯಲು ಸಂಚು | Electricity
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison_esOt on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • playboy888_vyOn on ಸುಟ್ಟು ಕರಕಲಾದ ನತದೃಷ್ಟರು | Attibele
    • KennethMef on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe