ನವದೆಹಲಿ.
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವರಿಗೆ ದೆಹಲಿ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ.ಅಲ್ಲದೆ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣ್ಯನ್ ಸ್ವಾಮಿ ಅವರಿಗೆ ತೀವ್ರ ಮುಖಭಂಗವಾಗಿದೆ.
ಯಂಗ್ ಇಂಡಿಯಾ ಸಂಸ್ಥೆ ನೇತೃತ್ವದ ನ್ಯಾಷನಲ್ ಹೆರಾಲ್ಡ್ ದಿನಪತ್ರಿಕೆ ಪ್ರಕರಣದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರ ವಿರುದ್ಧ ಸಲ್ಲಿಕೆಯಾಗಿದ್ದ ಎಫ್ಐಆರ್ ಅನ್ನು ಕೋರ್ಟ್ ವಜಾಗೊಳಿಸಿದೆ.
ಇವರ ವಿರುದ್ಧ ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಲು ಬರುವುದಿಲ್ಲ ಎಂದು ಹೇಳಿರುವ ನ್ಯಾಯಾಲಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಡೆಯುತ್ತಿರುವ ಜಾರಿ ನಿರ್ದೇಶನಾಲಯದ ತನಿಖೆ ಮುಂದುವರಿಸಲು ಅನುಮತಿ ನೀಡಿದೆ.
ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮಾಡಿರುವ ಆರೋಪಗಳಿಗೆ ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲ. ಈ ಪ್ರಕರಣದಲ್ಲಿ ಅಕ್ರಮ ಲೇವಾದೇವಿ ವ್ಯವಹಾರ ನಡೆದಿದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ ಈ ಹಿನ್ನೆಲೆಯಲ್ಲಿ ಇದನ್ನು ಆದರಿಸಿ ಹೊರಡಿಸಲಾಗಿರುವ ಎಫ್ ಐ ಆರ್ ಅನ್ವಯ ಯಾವುದೇ ಕ್ರಮ ಜರುಗಿಸಲು ಬರುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಇದೇ ದೂರು ಆದರಿಸಿ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ನೋಟಿಸ್ ನೀಡಿದೆ ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಬೇಕಿದ್ದ ಸಹೋದರರು ಅದಕ್ಕೆ ಸಮಯ ಅವಕಾಶ ಕೋರಿದ್ದಾರೆ ಅಲ್ಲದೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರತಿ ನೀಡುವಂತೆ ಮನವಿ ಮಾಡಿದ್ದಾರೆ.
ಆದರೆ ಇದೀಗ ನ್ಯಾಯಾಲಯ ಜಾರಿ ನಿರ್ದೇಶನಲಯ ಸಲ್ಲಿಸಿರುವ ಎಫ್ ಐ ಆರ್ ಅನ್ನು ರದ್ದು ಪಡಿಸಿದೆ ಅಲ್ಲದೆ ಈ ಎಫ್ ಐ ಆರ್ ಅನ್ವಯ ಯಾರನ್ನು ವಿಚಾರಣೆಗೆ ಒಳಪಡಿಸಬಾರದು ಮತ್ತು ಎಫ್ಐಆರ್ ಪ್ರತಿಯನ್ನು ಯಾರಿಗೂ ಕೊಡಬಾರದು ಎಂದು ಸೂಚಿಸಿದೆ.
ಕೋರ್ಟ್ ನೀಡಿರುವ ತೀರ್ಪನ್ನು ತುಂಬು ಹೃದಯದಿಂದ ಸ್ವಾಗತಿಸಿರುವ ಕಾಂಗ್ರೆಸ್ ನ್ಯಾಯಾಲಯದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ, ರಾಜಕೀಯ ಕಾರಣಕ್ಕಾಗಿ ದುರುದ್ದೇಶದಿಂದ ಈ ಈ ಪ್ರಕರಣ ದಾಖಲಿಸಲಾಗಿತ್ತು ಕಾಂಗ್ರೆಸ್ಸಿನ ಪ್ರಭಾವಿ ನಾಯಕರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನದ ಫಲವಾಗಿ ಸಲ್ಲಿಸಲಾಗಿದ್ದ ದೂರು ವಜಾಗೊಳಿಸುವ ಮೂಲಕ ನ್ಯಾಯಾಲಯ ಎಲ್ಲರನ್ನೂ ಆರೋಪ ಮುಕ್ತಗೊಳಿಸಿದೆ ಇದು ಸದಾಕಾಲ ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ಮತ್ತು ಅದರ ಪರಿವಾರಕ್ಕೆ ತಕ್ಕ ಉತ್ತರ ನೀಡಿದೆ ಎಂದು ಹೇಳಿದೆ.
Previous Articleಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ
Next Article ಕಸ್ತೂರಿ ರಂಗನ್ ವರದಿ ತಿರಸ್ಕಾರ

