ಬೆಂಗಳೂರು.
ಪ್ರಸಕ್ತ ಸರ್ಕಾರದ ಹಣಕಾಸು ಮಂತ್ರಿಯಾಗಿ ತಮ್ಮ ಎರಡನೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕೆಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.
1. ರೈತರಿಗಾಗಿ ‘ಭೂ ಸಿರಿ‘ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಇದರಡಿಯಲ್ಲಿ 10 ಸಾವಿರ ರೂಪಾಯಿ ಹೆಚ್ಚುವರಿ ಸಹಾಯಧನ
2. ’ರೈತ ಸಿರಿ‘ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ
3. ’ವಿದ್ಯಾವಾಹಿನಿ‘ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
4. ‘ಗೃಹಿಣಿ ಶಕ್ತಿ‘ ಯೋಜನೆ ಜಾರಿ ಮಾಡಿ, 46,278 ಕೋಟಿ ರೂಪಾಯಿ ಅನುದಾನ
5. ‘ನಮ್ಮ ನೆಲೆ‘ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ.
6.’ಸಹ್ಯಾದ್ರಿ ಸಿರಿ‘ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ನೀರು ಸಂರಕ್ಷಣೆಗೆ ಹಾಗೂ ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ‘ ಯೋಜನೆಗೆ 10 ಕೋಟಿ ರೂಪಾಯಿ ಮೀಸಲು
7. ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ‘ ಯೋಜನೆ
8. ‘ಮುಖ್ಯಮಂತ್ರಿ ವಿದ್ಯಾ ಶಕ್ತಿ‘ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ.
9. ‘ಸಹಸ್ರ ಸರೋವರ‘ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ಧಿ
10. ‘ಬದುಕುವ ದಾರಿ‘ ಯೋಜನೆಯಡಿ ಯುವಜನರಿಗೆ 3 ತಿಂಗಳು ITI ತರಬೇತಿ.
11. ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ‘ ಯೋಜನೆಯಡಿ 2 ಸಾವಿರ ರೂಪಾಯಿ ನೆರವು
12. 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್‘ ಯೋಜನೆ
13.’ಜಲನಿಧಿ‘ ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ, ಗೋ ಶಾಲೆಗಳ ನಿರ್ಮಾಣಕ್ಕೆ ‘ಪುಣ್ಯ ಕೋಟಿ ದತ್ತು’ ಯೋಜನೆ
14. ‘ಸ್ವಚೇತನ‘ ಯೋಜನೆಯಡಿ 5 ಸಾವಿರ ಅಂಗವಿಕಲರಿಗೆ ದ್ವಿಚಕ್ರ ವಾಹನ


1 Comment
yo ngl this thing is lowkey addictive lol play dream catcher hit different fr fr, been playing for like two weeks and cant stop, imo its worth checking out if ur into this kinda stuff