ಕೇರಳ: ಕೇರಳದಲ್ಲಿ ಕೊರೋನಾ ವೈರಸ್ ಆತಂಕದ ನಡುವೆಯೇ ಇದೀಗ ನೊರೊ ವೈರಸ್ ಕೂಡ ಮತ್ತೊಮ್ಮೆ ಎಂಟ್ರಿ ಕೊಟ್ಟಿದೆ.
ಪ್ರಾಥಮಿಕ ಶಾಲೆಯ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ವಾಂತಿ, ಭೇದಿ ಹಾಗು ಜ್ವರದ ಲಕ್ಷಣಗಳನ್ನು ಹೊಂದಿರುವ ಮಕ್ಕಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಸೋಂಕು ಉಂಟಾಗಿದೆ ಎನ್ನಲಾಗಿದ್ದು, ಹೀಗಾಗಿ ಕೇರಳದ ಶಿಕ್ಷಣ ಸಚಿವ ವಿ. ಶಿವಕುಟ್ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಿಸಿಯೂಟದ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.