ಬೆಂಗಳೂರು,ಅ.25-
ರಾಜ್ಯದಲ್ಲಿ ಆಡಳಿತ ರೂಢ ಕಾಂಗ್ರೆಸ್ ಜನಪ್ರಿಯತೆ ಹೆಚ್ಚುತ್ತಿದೆ. ಮತ್ತೊಂದೆಡೆ ಒಳ ಜಗಳದಿಂದ ಪ್ರತಿ ಪಕ್ಷ ಬಿಜೆಪಿ ತತ್ತರಿಸಿ ಹೋಗಿದೆ ಇದರಿಂದ ಬೇಸರಗೊಂಡಿರುವ ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಸೇರಿ ಎಂಟು ಮಂದಿ ಬಿಜೆಪಿ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದ್ದಾರೆ ಕೇವಲ ಎಂಟು ಶಾಸಕರು ಮಾತ್ರವಲ್ಲ ಅದಕ್ಕಿಂತಲೂ ಹೆಚ್ಚಿನ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಈ ಸಂಬಂಧ ಮಾತುಕತೆ ನಡೆದಿದೆ ಎಂದು ತಿಳಿಸಿದರು.
ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವಿವರ ಸದ್ಯಕ್ಕೆ ಹೇಳುವುದಿಲ್ಲ ಈ ಕುರಿತಾಗಿ ಮಾತುಕತೆ ನಡೆಯುತ್ತಿದೆ ಉಪElectionಯ ಫಲಿತಾಂಶ ಹೊರಬೀದ್ದ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದರು.
ಬಿಜೆಪಿಯ ಕೆಲವು ನಾಯಕರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕೀಯಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು ಪಕ್ಷಕ್ಕೆ ಬರಬಹುದು. ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ವ್ಯಕ್ತವಾಗುತ್ತಿದೆ ಎಂದರು.
ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎದು ಹೇಳುವವರ ಬದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.
Previous Articleಮುಡಾ ಅಧಿಕಾರಿಗಳಿಗೆ ED ಸಮನ್ಸ್ .
Next Article ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.