Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಒಂದು ಆರತಕ್ಷತೆ.
    ಪ್ರಚಲಿತ

    ಹೀಗೂ ಒಂದು ಆರತಕ್ಷತೆ.

    vartha chakraBy vartha chakraDecember 5, 2025Updated:December 5, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ : ಮದುವೆ ಅಂದ ಮೇಲೆ ವಧು-ವರ ಇರಬೇಕು ಅದರಲ್ಲೂ ಆರತಕ್ಷತೆ ಎಂದರೇ ಅದೊಂದು ಅದ್ದೂರಿ ಸಮಾರಂಭ.ಬಂಧು,ಬಳಿಗೆ, ಸ್ನೇಹಿತರು ಎಲ್ಲರೂ ಸೇರಿ ಸಂಭ್ರಮಿಸುವ ಸಮಾರಂಭ. ಆದರೆ ಹುಬ್ಬಳ್ಳಿಯಲ್ಲೊಂದು ಮದುವೆ ಆರತಕ್ಷತೆ ಸಮಾರಂಭ ನಡೆದಿದೆ. ಆದರೆ ಅದರಲ್ಲಿ ವಧು ವರರ ಇರಲಿಲ್ಲ.
    ಇದೇನು ಆರತಕ್ಷತೆಗೆ‌ ಬರದೆ ವಧು-ವರರು ಪರಾರಿಯಾದರಾ.. ಅಂತ ಕೇಳಬೇಡಿ ಇದಕ್ಕೆ ಕಾರಣ ಇಂಡಿಗೋ ವಿಮಾನ.
    ಇನ್ನು ಈ ಆರತಕ್ಷತೆ ಸಮಾರಂಭದಲ್ಲಿ ಮಗಳು-ಅಳಿಯನ ಬದಲು ವಧುವಿನ ತಂದೆ-ತಾಯಿಯೇ ಕುಳಿತು ಬಂಧು ಬಾಂಧವರಿಂದ ಉಡುಗೊರೆ ಸ್ವೀಕರಿಸಿ ಆನ್‌ಲೈನ್‌ನಲ್ಲಿ ಆರತಕ್ಷತೆ ಸಂಪ್ರದಾಯ, ಶಾಸ್ತ್ರ ಮುಗಿಸಿದ್ದಾರೆ.
    ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿರುವ ಹುಬ್ಬಳ್ಳಿಯ ಮೇಧಾ ಕ್ಷೀರಸಾಗರ ಹಾಗೂ ಭುವನೇಶ್ವರದ ಸಂಗಮ ದಾಸ್‌, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ ಕೆಲಸದ ಸ್ಥಳದಲ್ಲಿ ಪ್ರೀತಿಯ ಬಲೆಗೆ ಬಿದ್ದಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಕುಟುಂಬದವರು ಇವರಿಬ್ಬರ ಪ್ರೀತಿಗೆ ಒಪ್ಪಿ ಮದುವೆ ಭುವನೇಶ್ವರ ಆರತಕ್ಷತೆ ಹುಬ್ಬಳ್ಳಿ ಎಂದು ನಿಗದಿ ಮಾಡಿದ್ದರು ಅದರಂತೆ ಇಬ್ಬರ ಮದುವೆಯನ್ನು ಭುವನೇಶ್ವರದಲ್ಲಿ ನವೆಂಬರ್ 23 ರಂದು ನೆರವೇರಿಸಿದ್ದರು.
    ವಧುವಿನ ತವರು ಹುಬ್ಬಳ್ಳಿಯಲ್ಲಿ ಡಿಸೆಂಬರ್ 3ರಂದು ಆರತಕ್ಷತೆ ಆಯೋಜಿಸಿದ್ದರು. ಇದಕ್ಕಾಗಿ ಹುಬ್ಬಳ್ಳಿಯ ಗುಜರಾತ್‌ ಭವನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ವಧು ಹಾಗೂ ವರನ ಸಂಬಂಧಿಕರೂ ಬಂದಿದ್ದರು. ವಧು-ವರರು ಹಾಗೂ ವರನ ಪೋಷಕರು ಮತ್ತು ಸಂಬಂಧಿಕರು ಭುವನೇಶ್ವರದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಹುಬ್ಬಳ್ಳಿಗೆ ಆಗಮಿಸಲು ಡಿಸೆಂಬರ್ 2ಕ್ಕೆ ವಿಮಾನ ಬುಕ್ ಮಾಡಿದ್ದರು.
    ಈ ನಡುವೆ ಇವರು ಟಿಕೆಟ್ ಬುಕ್ ಮಾಡಿದ್ದ ಇಂಡಿಗೋ ವಿಮಾನ ಸಿಬ್ಬಂದಿ ಇವರಿಗೆ ಕರೆ ಮಾಡಿ ಡಿಸೆಂಬರ್ 2ರ ಬೆಳಗ್ಗೆ 9ರಿಂದ ಮರುದಿನ ಅಂದರೆ ಡಿಸೆಂಬರ್ 3 ಬೆಳಗಿನ ಜಾವ 4 ಗಂಟೆವರೆಗೂ ವಿಮಾನ ವಿಳಂಬವಾಗುತ್ತಿದೆ ಎಂದು ಹೇಳಿಕೊಂಡೇ ಬಂದಿದ್ದರು.
    ಇವರು ಕೂಡ ಇನ್ನೇನು ಕೆಲವೇ ಹೊತ್ತಿನಲ್ಲಿ ವಿಮಾನ ಬರಬಹುದು ಎಂದು ಕಾಯುತ್ತಾ ಕುಳಿತಿದ್ದರು ಆದರೆ
    ಇಂಡಿಗೋ ಸಿಬ್ಬಂದಿ, ಡಿಸೆಂಬರ್ 3ರ ಬೆಳಗ್ಗೆ ಎಂಟು ಗಂಟೆಗೆ ಕರೆ ಮಾಡಿ ನೀವು ಪ್ರಯಾಣ ಮಾಡಬೇಕಾಗಿದ್ದ ವಿಮಾನ ತಾಂತ್ರಿಕ ಕಾರಣಗಳಿಂದ ರದ್ದಾಗಿದೆ ಎಂದಿದ್ದರು.
    ಹೀಗಾಗಿ ಇವರೆಲ್ಲ ಬೆಂಗಳೂರಿಗೆ ಬರಲು ಯಾವುದೇ ಅನ್ಯ ಮಾರ್ಗ ತಿಳಿಯದೆ ವಧು-ವರ, ಪಾಲಕರೆಲ್ಲರೂ ಭುವನೇಶ್ವರದಲ್ಲಿಯೇ ಉಳಿದರು. ಇತ್ತ ಹುಬ್ಬಳ್ಳಿಯಲ್ಲಿ ವಧುವಿನ ತಂದೆ-ತಾಯಿ, ಸಂಬಂಧಿಕರು ಅವರಿಗಾಗಿ ಕಾಯುತ್ತಿದ್ದರು. ಈ ಮಧ್ಯೆ, ಕಲ್ಯಾಣ ಮಂಟಪ ಬುಕ್‌ ಆಗಿತ್ತು. ಜತೆಗೆ, ಎಲ್ಲ ತಯಾರಿಗಳೂ ಮುಗಿದಿದ್ದವು. ಸಾಕಷ್ಟು ಜನ ಸಂಬಂಧಿಕರು ಬಂದಿದ್ದರು
    ಕೊನೆಗೆ ಏನು ಮಾಡಬೇಕು ಎಂಬುದು ತಿಳಿಯದೆ, ಹುಬ್ಬಳ್ಳಿಯಲ್ಲಿ ವಧುವಿನ ತಂದೆ-ತಾಯಿಯೇ ವಧು-ವರರ ಕುರ್ಚಿಯಲ್ಲಿ ಕುಳಿತು, ಶಾಸ್ತ್ರ ಮುಗಿಸಿದರು. ಅತ್ತ ವಧು-ವರ, ತಾವೂ ತಯಾರಾಗಿ ಭುವನೇಶ್ವರದಲ್ಲಿ ಕುಳಿತರು. ಮುಹೂರ್ತಕ್ಕೆ ಸರಿಯಾಗಿ ಆನ್‌ಲೈನ್‌ ಮೂಲಕವೇ ಆರತಕ್ಷತೆ ಮುಗಿಸಿದರು.
    ಬಂದ ಸಂಬಂಧಿಕರು ವರ್ಚುವಲ್‌ ಮೂಲಕವೇ ವಧು-ವರರನ್ನು ಕಂಡು ಆಶೀರ್ವಾದ ಮಾಡಿ, ತಂದೆ-ತಾಯಿಗೆ ಗಿಫ್ಟ್‌ ಕೊಟ್ಟರು. ಅತ್ತ ವಧು-ವರ ಕೂಡ ಆನ್‌ಲೈನ್‌ ಮೂಲಕವೇ ಹುಬ್ಬಳ್ಳಿಯಲ್ಲಿ ಪಾಲ್ಗೊಂಡ ಸಂಬಂಧಿಕರಿಂದ ಆಶೀರ್ವಾದ ಪಡೆದರು.

    Verbattle
    Verbattle
    Verbattle
    ಮದುವೆ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಇಂಡಿಗೋ ವಿಮಾನಯಾನ ರದ್ದು-ಪ್ರಯಾಣಿಕರ ಪರದಾಟ
    Next Article ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • LinwoodGah on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Hemkef on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.