Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈಕ್ ನಲ್ಲಿ ಓವರ್ ಟೇಕ್ ಮಾಡಿದ್ದಕ್ಕೆ ಹೀಗಾ ಮಾಡೋದು?
    ಅಪರಾಧ

    ಬೈಕ್ ನಲ್ಲಿ ಓವರ್ ಟೇಕ್ ಮಾಡಿದ್ದಕ್ಕೆ ಹೀಗಾ ಮಾಡೋದು?

    vartha chakraBy vartha chakraDecember 3, 2022Updated:December 3, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ,ಡಿ.3-
    ದಲಿತ ಎಂಬ ಕಾರಣಕ್ಕೆ ಸವರ್ಣೀಯರು ಒಟ್ಟಾಗಿ ತನ್ಮನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆಂದು ಮನ ನೊಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
    ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದಾರೆ ಇದರಿಂದ ಆ ಯುವಕ ಅವಮಾನ ತಾಳಲಾರದೆ ಅಂತ್ಯವಾಗಿದ್ದಾನೆ
    ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು, ಶಿವರಾಜ್ , ಗೋಪಾಲಕೃಷ್ಣಪ್ಪ,ಹಾಗೂ ಮುನಿವೆಂಕಟಪ್ಪ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಡಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ನವೆಂಬರ್.30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.
    ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು, ಶಿವರಾಜ್, ಗೋಪಾಲಕೃಷ್ಣಪ್ಪ, ಮತ್ತು ಮುನಿವೆಂಕಟಪ್ಪ  ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
    ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸುತ್ತಿದ್ದರು. ಈ ವಿಷಯ ತಿಳಿದ ನಾನು ರಾತ್ರಿ 8.30ರ ಸಮಯದಲ್ಲಿ ನಮ್ಮ ಗ್ರಾಮದ ಹಿರಿಯರನ್ನು ಕರೆದುಕೊಂಡು ಪೆತಾಂಡ್ಲಹಳ್ಳಿಗೆ ಹೋಗಿ ಮಾತಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದೆವು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಉದಯ್ ಕಿರಣ್ ಅವಮಾನ ತಾಳಲಾರದೆ ಮನನೊಂದು ತೋಟದ ಮನೆಯಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
    ಇದಕ್ಕೆ ಆರೋಪಿಗಳು ಪದೇ ಪದೇ ಜಾತಿ ದೌರ್ಜನ್ಯವೆಸಗಿರುವುದೇ ಕಾರಣವಾಗಿದೆ ಎಂದು ಮೃತನ ಸೋದರ ಮಾವ ನಾಗರಾಜ್ ಆರೋಪಿಸಿದ್ದಾರೆ.
    ಈ ವಿಚಾರ ನಂಗಲಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿ, ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ನಾಳೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಮುಳಬಾಗಿಲಿನ ಹೋರಾಟಗಾರರಾದ ಜೈಭೀಮ್ ಗಂಗಾಧರ್ ಎಚ್ಚರಿಕೆ ನೀಡಿದ್ದಾರೆ. 

    Verbattle
    Verbattle
    Verbattle
    ನ್ಯಾಯ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleSaleem Effect ಹೇಗಿದೆ ನೋಡಿ!
    Next Article ವಿಶ್ವದ ಕನಿಷ್ಠ ಧಾರ್ಮಿಕ ರಾಷ್ಟಗಳ ಸಾಲಿನಲ್ಲಿUK
    vartha chakra
    • Website

    Related Posts

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    February 9, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Pmiugr on ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.