ಬೆಂಗಳೂರು,ಫೆ.13-
‘ಪಂಚಮಸಾಲಿಗಳಿಗೆ ಮೀಸಲಾತಿ ಕಲ್ಪಿಸುವುದಾಗಿ ತಾಯಿ ಮೇಲೆ ಆಣೆ ಪ್ರಮಾಣ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮತ್ತೆ ಮಾತು ತಪ್ಪಿದ್ದಾರೆ’ ಎಂದು ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮಿಜಿ (Basava Jaya Mruthyunjaya Swamiji) ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಂಚಮಸಾಲಿಗಳು ಮಾಜಿ ಸಿಎಂ ಜೆ.ಹೆಚ್.ಪಟೇಲ್ (J.H. Patel) ನಂತರ ನಿಮ್ಮನ್ನು ನಂಬಿದ್ದೆವು. ಆದರೆ ನೀವು ಇದುವರೆಗೂ ನಮ್ಮ ಬೇಡಿಕೆ ಈಡೇರಿಸದಿರುವುದು ಬೇಸರ ತಂದಿದೆ’ ಎಂದರು. ಚುನಾವಣಾ ನೀತಿ ಸಂಹಿತೆ ಮುನ್ನ ಪಂಚಮಸಾಲಿಗಳಿಗೆ 2A ಮೀಸಲಾತಿ ನೀಡುವ ಕುರಿತು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಪಂಚಮಸಾಲಿಗಳ ಬೇಡಿಕೆಗಳನ್ನು ಈಡೇರಿಸದಿದ್ದರೆ ಆಡಳಿತಾರೂಢ BJP ಪಕ್ಷಕ್ಕೆ 74 ವಿಧಾನಸಭಾ ಕ್ಷೇತ್ರಗಳಲ್ಲಿ ತೊಂದರೆ ಎದುರಾಗಲಿದೆ’ ಎಂದು ಎಚ್ಚರಿಸಿದರು.
‘BJP ಸರ್ಕಾರದ ಕೊನೆಯ ಅಧಿವೇಶನ ನಡೆಯುತ್ತಿರುವುದರಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮನಸು ಮಾಡಬೇಕು ಇಲ್ಲದಿದ್ದರೆ, ಈ ಬಾರಿ ನಾವು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

