Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪರಿಹಾರಕ್ಕೆ ನೆರವು ಕೊಡಿ-ಪ್ರಧಾನಿಗೆ ಸಿಎಂ ಮೊರೆ | Drought Relief
    Trending

    ಬರ ಪರಿಹಾರಕ್ಕೆ ನೆರವು ಕೊಡಿ-ಪ್ರಧಾನಿಗೆ ಸಿಎಂ ಮೊರೆ | Drought Relief

    vartha chakraBy vartha chakraDecember 19, 2023Updated:December 19, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, ಡಿಸೆಂಬರ್‌ 19- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ (Drought Relief) ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
    ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
    ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

    ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

    ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
    ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

    Verbattle
    Verbattle
    Verbattle
    drought Drought Relief Government Karnataka News Politics Trending Varthachakra ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಭೀತಿ-ಮಾಸ್ಕ್ ಕಡ್ಡಾಯಕ್ಕೆ ಚಿಂತನೆ | COVID-19
    Next Article ಗ್ರಾಮೀಣರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ | Dharmashtala
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • mine_jbSa on CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    • Jeffreymaf on ಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.