ಬೆಂಗಳೂರು, ನ.8- ಪೊಲೀಸ್ ಮಾಹಿತಿದಾರ (ಇನ್ ಫಾರ್ಮರ್) ಎಂದು ಹೇಳಿಕೊಂಡು ಪೊಲೀಸರಿಗೆ ವಂಚಿಸಿ ಅವರ ಹಣದಿಂದಲೇ ಮೋಜು ಮಸ್ತಿ ಮಾಡುತ್ತಿದ್ದ ಖತರ್ನಾಕ್ ಯುವಕನೊಬ್ಬ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕಳೆದ ನಾಲ್ಕು ವರ್ಷದಿಂದ ಪೊಲೀಸರಿಗೆ ವಂಚಿಸಿ ಪಬ್ ಬಾರ್ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಪೊಲೀಸ್ ಮಾಹಿತಿದಾರ ವಸೀಂ ಬಂಧಿತ ಆರೋಪಿಗಳಾಗಿದ್ದಾನೆ.
ಆರೋಪಿ ವಸೀಂ, ಪೊಲೀಸರ ಜೊತೆಯಲ್ಲಿ ಇದ್ದುಕೊಂಡೇ ಅವರಿಗೆ ಸಹಾಯ ಮಾಡುವ ನಾಟಕ ಮಾಡಿಅವರ ಬಳಿಯಿಂದಲೇ ಹಣ ಪಡೆದು ವಂಚಿಸಿದ್ದಾನೆ. ಅಲ್ಲಿ ಇಲ್ಲಿ ಸುತ್ತಾಡುತ್ತ ಮೋಜು ಮಸ್ತಿ ಮಾಡುತ್ತ, ಹಾಯಾದ ಜೀವನ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಲೊಂದು ದಂಧೆ ನಡೀತಿದೆ, ನಾನು ಅಲ್ಲಿಗೆ ಹೋಗಿ ಲೊಕೇಶನ್ ಕಳಿಸುವೆ. ದಂಧೆಯಲ್ಲಿ ಏನೇನು ನಡೆಯಲಿದೆ ಎಂದು ಮಾಹಿತಿ ಕೊಡುವೆ ಎಂದು ಪೊಲೀಸರಿಗೆ ಆರೋಪಿ ವಸೀಂ ನಂಬಿಸುತ್ತಿದ್ದ.
ಪೊಲೀಸರು ಈಗಲೇ ಕಾರ್ಯಾಚರಣೆ ನಡೆಸುತ್ತೇವೆ ಎಂದರೆ ತಡೆಯುತ್ತಿದ್ದ ಆರೋಪಿಯು ನಾನು ಅಲ್ಲಿಗೆ ಹೋಗಿ ಸ್ಪಾಟ್ ಲೊಕೇಶನ್ ಕಳಿಸುವೆ ಎನ್ನುತ್ತಿದ್ದ.
ಸ್ವಲ್ಪ ಹೊತ್ತಿನಲ್ಲಿ ಸರ್ ಆಟೋ ತೊಂದರೆ ಕೊಡುತ್ತಿದೆ, ಪೆಟ್ರೋಲ್ ಬೇಕಿತ್ತು, ಬೈಕ್ ಇಲ್ಲ. ಮನೆಯಲ್ಲಿ ಸಮಸ್ಯೆ ಎಂದು ನಂಬಿಸಿ 2ರಿಂದ 3 ಸಾವಿರ ಫೋನ್ ಪೇ ಮಾಡಿ ಎನ್ನುತ್ತಿದ್ದ,ಇದನ್ನು ನಂಬಿ ಪೊಲೀಸರು ಹಣ ಹಾಕಿದರೆ, ಹಣ ಬಂದ ಕೆಲವೇ ಕ್ಷಣಗಳಲ್ಲಿ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗುತ್ತಿದ್ದು ಸಿಸಿಬಿ ಹಾಗೂ ಕಾನೂನು ವ್ಯವಸ್ಥೆ ಪೊಲೀಸರಿಗೆ ಆರೋಪಿ ವಸೀಂ ಯಾಮಾರಿಸಿದ್ದು ಆರೋಪಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ