Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಂಗ್ ಹಿಡಿದು‌ ಅಬ್ಬರಿಸಿದ ಪೊಲೀಸ್ ಇನ್ಸ್ ಪೆಕ್ಟರ್ | Police Inspector
    ಸುದ್ದಿ

    ಲಾಂಗ್ ಹಿಡಿದು‌ ಅಬ್ಬರಿಸಿದ ಪೊಲೀಸ್ ಇನ್ಸ್ ಪೆಕ್ಟರ್ | Police Inspector

    vartha chakraBy vartha chakraOctober 28, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.28- ಕಳ್ಳಕಾಕರು,ಅಪರಾಧ ಕೃತ್ಯಗಳು‌,ಕಾನೂನು ಬಾಹಿರ ಕೃತ್ಯ ನಡೆಸುವವರಿಗೆ ಸಿಂಹಸ್ವಪ್ನವಾಗಿ ಜನ ಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರೇ ರೌಡಿಗಳ ರೀತಿ ಲಾಂಗ್ ಬೀಸಿ ಅಟ್ಟಹಾಸ ಮೆರೆದಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
    ಮಾಗಡಿ ರಸ್ತೆ ಪೊಲೀಸ್ ಠಾಣೆಯ‌ ಎಎಸ್​ಐ ಶ್ರೀನಿವಾಸ್ ಅವರು ದಯಾನಂದ್, ಶಶಿಧರ್ ಎಂಬ ಯುವಕರ ಮೇಲೆ ರೌಡಿಗಳ ರೀತಿ ಲಾಂಗ್​ನಿಂದ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ,ಎಎಸ್ ಐ ಶ್ರೀನಿವಾಸ್ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಒಂದು ಕೈಯಲ್ಲಿ ಮಚ್ಚು ಮತ್ತೊಂದು ಕೈಯಲ್ಲಿ ಲಾಠಿ ಹಿಡಿದು, ಯಾವ ರೌಡಿಗೂ ಕಮ್ಮಿ ಇಲ್ಲದಂತೆ ಎಎಸ್ ಐ ಶ್ರೀನಿವಾಸ್  ಅವರು ದಯಾನಂದ್, ಶಶಿಧರ್ ಮೇಲೆ ಮಚ್ಚು ಬೀಸಿ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.
    ಸಾಮಾಜಿಕ ಜಾಲತಾಣಗಳಲ್ಲೂ ದೃಶ್ಯಗಳು ಹರಿದಾಡಿದ್ದು,ಪೊಲೀಸ್‌ ಅಧಿಕಾರಿ ರೌಡಿಯಂತೆ ವರ್ತಿಸುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧಗಳು ವ್ಯಕ್ತವಾಗಿದೆ.
    ಎಎಸ್‌ಐ ಶ್ರೀನಿವಾಸ್‌ ಮಚ್ಚು ಝಳಪಿಸಲು ಕಾರಣವಾಗಿದ್ದು ಅವರ ಅಣ್ಣನ ಮಗ ಆನಂದ್ ಈತ ಅಕ್ಟೋಬರ್ 27ರ ರಾತ್ರಿ ವಿಜಯನಗರದ ತೇಜಸ್ವಿನಿ ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ. ಅದೇ ಬಾರ್‌ಗೆ ಬಿಯರ್ ಕುಡಿಯಲು ದಯಾನಂದ್ ಮತ್ತು ಶಶಿಧರ್ ಎಂಬುವವರು ಹೋಗಿದ್ದರು.
    ಕ್ಷುಲ್ಲಕ ಕಾರಣಕ್ಕೆ ಆನಂದ್ ಮತ್ತು ದಯಾನಂದ್, ಶಶಿಧರ್ ಮೂವರ ನಡುವೆ ಮಾತಿಗೆ ಮಾತು ಬೆಳೆದು ಸಣ್ಣ ಗಲಾಟೆ ಆಗಿದೆ. ಈ ವೇಳೆ ಆನಂದ್‌ ನಿಮ್ಮಿಬ್ಬರದ್ದು ಯಾವ ಏರಿಯಾ ಎಂದು ಕೇಳಿದ್ದಾನೆ. ಈ ವೇಳೆ ದಯಾನಂದ್‌ ನಮ್ಮದು ಇದೇ ಏರಿಯಾ, ನಿಂದು ಯಾವ ಏರಿಯಾ ಎಂದು ಕೇಳಿದ್ದಾನೆ. ನಂದು ಇದೇ ಏರಿಯಾನೇ ಬೇಕಾದರೆ ಬಾ ಮನೆ ತೋರಿಸುತ್ತೀನಿ ಎಂದು ಆನಂದ್‌ ಹೇಳಿದ್ದಾನೆ. ಇದಕ್ಕೆ ಒಪ್ಪಿಗೆ ಸೂಚಿಸಿದ ಅವರಿಬ್ಬರನ್ನು ಆನಂದ್‌ ತನ್ನ ಆಟೋದಲ್ಲೇ ಕರೆದುಕೊಂಡು ನೇರವಾಗಿ ಆರ್‌ಪಿಸಿ ಲೇಔಟ್‌ನಲ್ಲಿರುವ ಚಿಕ್ಕಪ್ಪ ಶ್ರೀನಿವಾಸ್ ಮನೆ ಬಳಿ ಕರೆತಂದಿದ್ದಾನೆ.

    ಆನಂದ್ ಡ್ರಾಮ‌ ಶುರು:
    ಇಲ್ಲಿ ಆನಂದ್‌ನ ಡ್ರಾಮಾ ಶುರುವಾಗಿದೆ. ಆಟೋದಿಂದ ಇಳಿದ ಆನಂದ್‌ ಜೋರಾಗಿ ಕೂಗಾಡಲು ಶುರು ಮಾಡಿದ್ದಾನೆ. ಇವರಿಬ್ಬರು ಕಳ್ಳರು‌ ಚಿಕ್ಕಪ್ಪ ಬೇಗ ಬನ್ನಿ ಎಂದು ಕೂಗಿಕೊಂಡಿದ್ದಾನೆ. ತಕ್ಷಣ ಎಎಸ್ ಐ ಶ್ರೀನಿವಾಸ್ ಒಂದು ಕೈಯಲ್ಲಿ ಮಚ್ಚು, ಮತ್ತೊಂದು ಕೈಯಲ್ಲಿ ಲಾಠಿ ಹಿಡಿದು ಓಡಿ ಬಂದಿದ್ದಾರೆ.
    ಇತ್ತ ಆನಂದ್ ಕೂಗಾಟ ಕಂಡ ಇಬ್ಬರೂ ಸುಮ್ಮನೆ ನಡೆದುಕೊಂಡು ಹೋಗಲಾರಂಭಿಸಿದರು.ಆಗ ಅವರ ಹಿಂದೆ ಓಡಿದ ಚಿಕ್ಕಪ್ಪ ಮತ್ತು ಮಗ ದಯಾನಂದ್, ಶಶಿಧರ್‌ನನ್ನು ಹಿಡಿದುಕೊಂಡಿದ್ದಾರೆ. ಬಳಿಕ ಅವರಿಗೆ ಮಾತನಾಡಲು ಬಿಡದೆ ಏಕಾಏಕಿ ಇಬ್ಬರ ಮೇಲೆ ಮನಬಂದಂತೆ ಹಲ್ಲೆಗೆ ಮುಂದಾಗಿದ್ದಾರೆ. ಇದರಿಂದ ದಯಾನಂದ್‌ ಮತ್ತು ಶಶಿಧರ್‌ ಕೆಳಗೆ ಬಿದ್ದಿದ್ದಾರೆ. ಬಿದ್ದವರನ್ನು ಲಾಠಿಯಿಂದ ಶ್ರೀನಿವಾಸ್‌ ಥಳಿಸಿದ್ದಾರೆ.

    ಅಪ್ಪ ಲಾಠಿಯಲ್ಲಿ ಹೊಡೆಯುತ್ತಿದ್ದರೆ, ಮಗ ಮಚ್ಚು ಹಿಡಿದುಕೊಂಡಿದ್ದ. ಅಪ್ಪನೊಂದಿಗೆ ಸೇರಿ ಮಗನೂ ಯುವಕರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಎಲ್ಲ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.
    ಯುವಕರು ಆಸ್ಪತ್ರೆಗೆ:
    ಸ್ಥಳೀಯರ ಮಾಹಿತಿ ಮೇರೆಗೆ ವಿಜಯನಗರ ಹೊಯ್ಸಳ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಇಬ್ಬರು ಯುವಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಶ್ರೀನಿವಾಸ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಶ್ರೀನಿವಾಸ್‌ ಪರಾರಿಯಾಗಿದ್ದಾರೆ.

    lic Police Police Inspector ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಾಯಕರ ಬಾಯಿಗೆ ಶಿವಕುಮಾರ್ ಬೀಗ | DK Shivakumar
    Next Article ಶಿವಕುಮಾರ್ ಆಶೆಗೆ ತಣ್ಣೀರೆರಚಲು ತೋಡಿದ ಬಾವಿ | DK Shivakumar
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    December 21, 2025

    1 Comment

    1. Scotthem on December 7, 2025 2:41 am

      ?Celebremos a cada devoto del destino !
      Jugar en casino sin dni permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino crypto sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casinos sin kyc.
      Jugar en casinos sin verificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com/. Gracias a esta flexibilidad, cada sesiГіn se vuelve mГЎs cГіmoda al usar servicios como casino sin registro.
      Casinos sin kyc, apuesta sin complicaciones – п»їhttps://casinoretirosinverificacion.com/
      ?Que la suerte te beneficie con celebremos juntos inolvidables movidas triunfantes !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_niSn on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • aviator_pooi on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • elektrokarniz kypit_rhsl on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe