ಮಂಗಳೂರು,ಜೂ.6- ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ನೈತಿಕ ಪೊಲೀಸ್ ಗಿರಿ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ನೈತಿಕ ಪೊಲೀಸ್ ಗಿರಿಯಲ್ಲಿ ನಿರತಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ನೈತಿಕ ಪೊಲೀಸ್ ಗಿರಿಯಲ್ಲಿ ತೊಡಗಿರುವ ವ್ಯಕ್ತಿಗಳ ಚಲನ ಲನಗಳ ಮೇಲೆ ಮಂಗಳೂರು ನಗರ ಪೊಲೀಸರು ಕಣ್ಣಿಟ್ಟಿದ್ದಾರೆ.
ಸಮಾಜದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿಕೊಡುವ ಆತಂಕದ ಹಿನ್ನೆಲೆಯಲ್ಲಿ ನೈತಿಕ ಪೊಲೀಸ್ ಗಿರಿ ಕೃತ್ಯ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಪೊಲೀಸರು ಇಂತಹ ಕೃತ್ಯಗಳಲ್ಲಿ ನಿರತರಾಗಿದ್ದ ವ್ಯಕ್ತಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.
ಐದು ವರ್ಷಗಳಲ್ಲಿ ಈ ರೀತಿಯ ಘಟನೆಗಳಲ್ಲಿ ಭಾಗಿಯಾದವರನ್ನು ಗುರುತಿಸಿ ಸಿಆರ್‌ಪಿಸಿ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.
ಸೋಮೇಶ್ವರದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು.
ಇದುವರೆಗೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿಯ 1.90 ಲ.ರೂ. ಬಾಂಡ್ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ
Previous ArticleBL ಸಂತೋಷ್ ಅಂದರೆ ಯಾರು ಅದು?
Next Article Ukraine ದೇಶದ Dam ಧ್ವಂಸ ಮಾಡಿದ Russia