Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    Election

    ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas

    vartha chakraBy vartha chakraOctober 20, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.20- ದಿಢೀರ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ.ಪೂರ್ಣಿಮಾ ತಮ್ಮ ಪತಿ ಬಿಜೆಪಿ ಮುಖಂಡ ಶ್ರೀನಿವಾಸ್ ಸೇರಿದಂತೆ ಹಲವು ಪ್ರಮುಖರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
    ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ಮತ್ತು ಜೆಡಿಎಸ್ ರಣ ತಂತ್ರ ರೂಪಿಸುತ್ತಿರುವಾಗಲೇ ಯಾದವ ಸಮುದಾಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೆಳೆದ ‘ಕೈ’ ಪಾಳೆಯ ರಾಜಕೀಯ ದಾಳ ಉರುಳಿಸುವಲ್ಲಿ ಯಶಸ್ವಿಯಾಗಿದೆ.

    ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂರ್ಣಿಮಾ ಹಾಗೂ ಇತರರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಪಕ್ಷಕ್ಕೆ ಮರಳಿರುವ ಪೂರ್ಣಿಮಾ ಮತ್ತು ಶ್ರೀನಿವಾಸ್ (Poornima Srinivas) ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು ಎಂದು ಹೇಳಿದರು
    ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಈ ಎಲ್ಲರನ್ನೂ ಪಕ್ಷ ಗೌರವದಿಂದ ನಡೆಸಿಕೊಳ್ಳಲಿದೆ ಎಂದರು.

    ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
    ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿ ಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

    ಬೆಸೆದ‌ಕೊಂಡಿ:
    ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ,
    ಇಂದು ನನಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಹಳ ಸಂತೋಷದ ದಿನ. ನಾವು ಎ.ಕೃಷ್ಣಪ್ಪ ಅವರ ಜತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಒಟ್ಟಾಗಿ ರಾಜಕಾರಣ ಮಾಡಿದವರು. ವೀರಪ್ಪ ಮೋಯ್ಲಿ ಅವರು ಟಿಕೆಟ್ ನೀಡಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದರು ಎಂದು ಹೇಳಿದರು
    ನಮ್ಮ ತಪ್ಪುಗಳಿಂದ ಅವರ ಜತೆಗಿನ ಕೊಂಡಿ ಕಳಚಿತ್ತು. ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಇಂದು ಮತ್ತೆ ಆ ಕೊಂಡಿ ಬೆಸೆದುಕೊಂಡಿದೆ ಎಂದು ಬಣ್ಣಿಸಿದರು.

    ನಾನು ಬಹಳ ದಿನಗಳಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಗಾಳ ಹಾಕುತ್ತಿದ್ದೆ. ಪೂರ್ಣಿಮಾ ಅವರು ಪಕ್ಷಕ್ಕೆ ಬಾರದಿದ್ದಾಗ, ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ. ಬೇರೆ ಲೆಕ್ಕಾಚಾರದಿಂದ ಇಷ್ಟು ದಿನ ಅವರು ಪಕ್ಷ ಸೇರಿರಲಿಲ್ಲ. ಇಂದು ಅವರು ತೀರ್ಮಾನ ಮಾಡಿ ನಿಮ್ಮೆಲ್ಲರ ಸಮ್ಮುಖದಲ್ಲಿ ನಮ್ಮ ಪಕ್ಷ ಸೇರುತ್ತಿದ್ದಾರೆ. ಇಂದು ಕೇವಲ ಪೂರ್ಣಿಮಾ ಅವರು ಹಾಗೂ ಶ್ರೀನಿವಾಸ್ ಇವರಿಬ್ಬರು ಮಾತ್ರ ಪಕ್ಷ ಸೇರುತ್ತಿಲ್ಲ. ಕರ್ನಾಟಕ ರಾಜ್ಯದ ಪ್ರವರ್ಗ 1ರ ಜಾತಿಯ ಒಕ್ಕೂಟ, ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘ ಸೇರಿದಂತೆ ಅನೇಕ ಸಂಘಟನೆಗಳ 4-5 ಸಾವಿರ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿ ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಇವರೆಲ್ಲರನ್ನು ಪಕ್ಷದ ಪರವಾಗಿ ಕಾಂಗ್ರೆಸ್ ಗೆ ತುಂಬು ಹೃದಯದಿಂದ ಸ್ವಾಗತಿಸಿತ್ತೇನೆ ಎಂದು ಹೇಳಿದರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ ಪಕ್ಷದ ಸಿದ್ಧಾಂತಕ್ಕಾಗಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

    Verbattle
    Verbattle
    Verbattle
    Congress Government Karnataka m News Politics poornima Poornima Srinivas ಕಾಂಗ್ರೆಸ್ Election ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar
    Next Article ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothynoiff on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Dewayneoffex on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • WilliamSkity on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.