Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    Viral

    ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga

    vartha chakraBy vartha chakraJanuary 28, 20241 Comment3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.28 – ಜಾತಿ ಗಣತಿ ವಿಚಾರದಲ್ಲಿ ನಡೆಯುತ್ತಿರುವ ಪರ–ವಿರೋಧ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಕೈ’ ಬಲಪಡಿಸುವ ಉದ್ದೇಶದಿಂದ ಶೋಷಿತ ಸಮುದಾಯಗಳ ಸಮಾವೇಶದ ಮೂಲಕ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಶಕ್ತಿ ಪ್ರದರ್ಶನ ನಡೆಯಿತು. ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಡೆದ ಈ ಸಮಾವೇಶ ರಾಜಕೀಯ ಪಕ್ಷಗಳಿಗೆ ಸಂದೇಶ ರವಾನಿಸುವ ಮೂಲಕ ಆಡಳಿತ ರೂಡ ಕಾಂಗ್ರೆಸ್ ಮತ್ತೊಮ್ಮೆ ಅಹಿಂದ ಮತಗಳ ಬುಟ್ಟಿಗೆ ಕೈ ಹಾಕುವ ಪ್ರಯತ್ನ ಮಾಡಿದರು.

    ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
    ಸಂವಿಧಾನ ವಿರೋಧಿಗಳಿಗೆ-ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ತಕ್ಕ ಪಾಠ ಕಲಿಸಿ:
    ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸಿ ಸಂವಿಧಾನ ವಿರೋಧಿಸುವ BJP-RSS ಅನ್ನು ತಿರಸ್ಕರಿಸಿ ಎಂದು ಮನವಿ ಮಾಡಿದರು.
    ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.

    ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.
    ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

    ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ.
    ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದರು.
    ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು.

    ಸಂಘಟನೆಗಳ ಮೂಲಕ ಜಾಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರವನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದರು.
    ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ.
    ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹಿ ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದರು.

    ಈ ಕಾರಣಕ್ಕೇ ಪಟ್ಟ ಭದ್ರ ಹೊತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
    ಜಾತಿಗಣತಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ ಆರ್ಥಿಕ ಗಣತಿಯ ಕಾಂತರಾಜ್ ಅವರ ವರದಿಯನ್ನು ಕೆಲವರು ಓದದೆ, ತಿಳಿಯದೆ ವಿರೋಧಿಸುತ್ತಿದ್ದಾರೆ. ನಾವು ಕಾಂತರಾಜ ವರದಿಯನ್ನು ಖಂಡಿತಾ ಸ್ವೀಕರಿಸುತ್ತೇವೆ ಎಂದು ಹೇಳಿದರು ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡಿ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ ಇದೊಂದು ಐತಿಹಾಸಿಕ ನಿರ್ಧಾರ ಎಂದರು.

    ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಜಮೀರ್ ಅಹಮದ್ , ದಿನೇಶ್ ಗುಂಡೂರಾವ್, ಆರ್. ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್ ಮುಂತಾದವರು ಮಾತನಾಡಿ ದೇಶದಲ್ಲಿ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು.
    ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20 ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದು ಮಾತನಾಡಿದರು.

    Verbattle
    Verbattle
    Verbattle
    #chitradurga BJP Government Karnataka Politics rss Trending ಇಡಿ ಈಶ್ವರಪ್ಪ ಉಗ್ರ ಕಾಂಗ್ರೆಸ್ Election ಧರ್ಮ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    Next Article ಚುನಾವಣೆ ಅಖಾಡಕ್ಕೆ ಮೊದಲ ಎನ್ ಡಿ ಎ ಅಭ್ಯರ್ಥಿ | JDS
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    1 Comment

    1. i-tec on January 16, 2026 12:47 pm

      Мультимедийный интегратор ай-тек интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Daviddek on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Bryandiz on ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.