ಬೆಂಗಳೂರು, ಸೆ.1 – ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಯುವ ಮುಖಂಡ ಪ್ರಜ್ಚಲ್ ರೇವಣ್ಣ (Prajwal Revanna) ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.
ಲೋಕಸಭಾ Election ಸಮಯದಲ್ಲಿ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿರುವ ಆರೋಪ ಎದುರಿಸುತ್ತಿದ್ದಾರೆ.
ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‍ನಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಜ್ವಲ್ ರೇವಣ್ಣ ಅವರು,ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ
ಅನೂರ್ಜಿತ ಗೊಳಿಸಿ,ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ ಎರಡನೇ ಅಭ್ಯರ್ಥಿಯಾಗಿರುವ ತಮ್ಮನ್ನೇ ಆಯ್ಕೆಯಾದ ಅಭ್ಯರ್ಥಿ ಎಂದು ಪರಿಗಣಿಸಬೇಕು ಎಂದು ಕೋರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಈ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ವರದಿ ನೀಡಿದ ಅಂದಿನ ಜಿಲ್ಲಾಧಿಕಾರಿ, ಪ್ರಿಯಾಂಕಾ ಮೇರಿ ಫಾನ್ಸಿಸ್ ಈ ಪ್ರಕರಣ ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತ ಎಂದು ವರದಿ ನೀಡಿದ್ದರು.ಪ್ರಕರಣದ ಸಂಬಂಧ ಹೈಕೋರ್ಟ್‍ಗೆ ಹಾಜರಾಗಿದ್ದ ಪ್ರಜ್ವಲ್ ರೇವಣ್ಣ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.
ಎರಡು ಕಡೆ ವಾದ- ವಿವಾದ ಆಲಿಸಿದ ನ್ಯಾಯಪೀಠ ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿ ತೀರ್ಪು ನೀಡಿದೆ..ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.
ಇನ್ನೂ ಈ ತೀರ್ಪಿನಿಂದಾಗಿ ಲೋಕಸಭೆಯಲ್ಲಿ ಇದ್ದ ಒಂದು ಸ್ಥಾನವನ್ನು ಜೆಡಿಎಸ್ ಕಳೆದುಕೊಂಡಿದೆ. ವಿಶೇಷವೆಂದರೆ ಈ ಚುನಾವಣೆ ತಕರಾರು ಅರ್ಜಿ ಸಲ್ಲಿಸಿರುವ ಎ.ಮಂಜು ಅಂದು ಬಿಜೆಪಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು ಈಗ ಅವರು ಜೆಡಿಎಸ್ ಸೇರಿದ್ದು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
1 Comment
провести соут в москве организации проводящие соут