ಮೈಸೂರು, ನ.3- ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಷಯ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೂರ್ಣ ಅವಧಿಗೆ ತಾವೇ ಸಿಎಂ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ ಬೆನ್ನಲ್ಲೇ ತಾವು ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರುವಸಿಎಂ ಆಗಿ ಮುಂದುವರೆಯಬೇಕು ಎಂಬ ವಿಚಾರ ಅವರ ವೈಯಕ್ತಿಕ ಹೇಳಿಕೆ. ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ನಿರ್ಧರಿಸುತ್ತೆ ಎಂದರು.
ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ದನಿದ್ದೇನೆ ಎಂದು ಹೇಳುವ ಮೂಲಕ ಈ ಕುರಿತಾದ ಚರ್ಚೆಗೆ ಹೊಸ ವ್ಯಾಖ್ಯಾನ ಬರೆದಿದ್ದಾರೆ ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಹುದ್ದೆಯ ಬಗ್ಗೆ ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.
ಜಿಲ್ಲಾ ಪಂಚಾಯ್ತಿ ಸದಸ್ಯರಿಂದ ಹಿಡಿದು ಶಾಸಕರವರೆಗೂ ತಮ್ಮ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ, ಅವರ ಹೇಳಿಕೆ, ಕಲ್ಲಿನಲ್ಲಿ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಮಾರ್ಮಿಕವಾಗಿ ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಇದನ್ನು ಖುದ್ದು ಬಿಜೆಪಿಯ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯವರು ತಮ್ಮದನ್ನು ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ ಎಂದು ಖಡಕ್ಕಾಗಿ ನುಡಿದರು. ನಮ್ಮ ಆದ್ಯತೆ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡುವುದಾಗಿದೆ ಎಂದು ಅವರು ತಿಳಿಸಿದರು.


6 Comments
betmgm NV betmgm-play betmgm TN
Harness the excitement of craps and sic bo in one place. In crown coins casino app, multi-language games cater to everyone. Roll the dice and claim victory!
Nothing compares to the thrill of watching symbols tumble in Sweet Bonanza! Scatters sweet bonanza online unlock a world of multiplier mayhem and huge win chains. Start your sweet adventure right now!
Power through to prairie prosperity. buffalo gold slot unleashes sunset scatters, bonus chains, and life-altering gold pots. Get spinning!
No KYC, no problem. Crypto stake bonus freedom starts here.
kings maxxwins Casino: Play bold, win big. Claim 500 Cash Eruption spins after $5 + up to $1K first-day protection. The best is here!