ಶ್ರೀ ಪೆರಂಬದೂರು. ಸೆ,7 – ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆಗೆ ಅದ್ದೂರಿ ಚಾಲನೆ ಸಿಕ್ಕಿದೆ.
3,570 ಕಿಲೋ ಮೀಟರ್ ದೂರದ ಭಾರತ್ ಜೋಡೋ ಪಾದಯಯಾತ್ರೆಗೆ ಮುನ್ನ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಪೆರಂಬೂರಿನ ರಾಜೀವ್ ಗಾಂಧಿ ಸ್ಮಾರಕದಲ್ಲಿ ನಡೆಯುವ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡರು.
ಕರ್ನಾಟಕ, ತಮಿಳು ನಾಡು, ಕೇರಳ ಮತ್ತು ಆಂಧ್ರಪ್ರದೇಶದ ನೂರಾರು ಕಾರ್ಯಕರ್ತರು ಈ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡರು.
ಇಡೀ ಪ್ರಾರ್ಥನಾ ಸಭೆಯ ಆಯೋಜನೆಯನ್ನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಾಡಲಾಗಿದ್ದು ಇದರ ಅಚ್ಚುಕಟ್ಟುತನ, ಗಾಂಭೀರ್ಯತೆ ಎಲ್ಲರ ಗಮನ ಸೆಳೆಯಿತು. ಇಂತಹದೊಂದು ಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿದ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದರು.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸುವದರೊಂದಿಗೆ ಭಾರತ್ ಜೋಡೋ ಯಾತ್ರೆ ಗೆ ಚಾಲನೆ ಸಿಕ್ಕಿದ್ದು ಪಾದಯಾತ್ರೆ ಕನ್ಯಾಕುಮಾರಿಯಿಂದ ಆರಂಭವಾಗಲಿದೆ.
ಪಾದಯಾತ್ರೆ ಆರಂಭದ ಸಮಯದಲ್ಲಿಉದ್ಘಾಟನಾ ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಉಪಸ್ಥಿತರಿರುವರು
Previous Articleಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ವಂಶಿಕಾ
Next Article ರಿವಾಲ್ವಾರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್