ಬೆಂಗಳೂರು – ಮುಂಬರುವ ಲೋಕಸಭೆ Electionಗೆ ರಣಕಹಳೆ ಮೊಳಗಿಸಿರುವ ಬಿಜೆಪಿ ತನ್ನ ಹುರಿಯಾಳುಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯತ್ವದಿಂದ ನಿವೃತ್ತಿಯಾದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಕೇರಳದ ತಿರುವನಂತಪುರದಿಂದ ಕಣಕ್ಕಿಳಿಯಲು ಟಿಕೆಟ್ ನೀಡಲಾಗಿದೆ ಅಲ್ಲಿ ರಾಜೀವ್ ಚಂದ್ರಶೇಖರ್ ರವರು ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಶಶಿ ತರೂರ್ ಅವರನ್ನು ಎದುರಿಸಬೇಕಾಗಿದೆ.
ರಾಜ್ಯ ಸಭೆ ಸದಸ್ಯತ್ವದಿಂದ ನಿವೃತ್ತಿಯಾದ ರಾಜೀವ್ ಚಂದ್ರಶೇಖರ್ ಅವರನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗುವುದು ಎಂಬ ಸುದ್ದಿಗಳು ದಟ್ಟವಾಗಿದ್ದವು ಆದರೆ ಇದೀಗ ಬಿಜೆಪಿ ವರಿಷ್ಠ ಮಂಡಳಿ ಅವರನ್ನು ಅವರ ತವರು ರಾಜ್ಯ ಕೇರಳದಿಂದ ಕಣಕ್ಕಿಳಿಯುವಂತೆ ಸೂಚಿಸುವ ಮೂಲಕ ಅಲ್ಲಿನ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ.
ಉತ್ತರ ಪ್ರದೇಶ ದೆಹಲಿ ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳ ಹುರಿಯಾಳುಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಹೈಕಮಾಂಡ್ ಕರ್ನಾಟಕದ ಅಭ್ಯರ್ಥಿಗಳ ಯಾವುದೇ ಪಟ್ಟಿ ಬಿಡುಗಡೆ ಮಾಡಿಲ್ಲ.
ಬಿಜೆಪಿ ರಾಜ್ಯ ಘಟಕ ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಮಂಡಳಿಗೆ ರವಾನೆ ಮಾಡಿದೆ ಇವುಗಳನ್ನು ಅವಲೋಕಿಸಿ ಹೈಕಮಾಂಡ್ ತನ್ನ ಅಂತಿಮ ಪಟ್ಟಿ ಪ್ರಕಟಿಸಬೇಕಿದೆ ಆದರೆ ಕರ್ನಾಟಕದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು ಸ್ಥಳೀಯ ಲೆಕ್ಕಾಚಾರಗಳನ್ನು ಆದರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾಗಿದೆ ಹೀಗಾಗಿ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಶಿವಕುಮಾರ್ ಉದಾಸಿ, ಬಚ್ಚೇಗೌಡ, ಜಿಎಸ್ ಬಸವರಾಜು, ಶ್ರೀನಿವಾಸಪ್ರಸಾದ್ ಸೇರಿದಂತೆ ಕೆಲವರು ಈ ಬಾರಿ ತಾವು ಚುನಾವಣೆಯ ಅಖಾಡಕ್ಕೆ ಧುಮುಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಬೇಕಾಗಿದೆ. ಜೊತೆಗೆ ಕೆಲವು ಸಂಸದರು ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದಾರೆ ಎಂಬ ವರದಿಗಳಿದ್ದು ಹೈಕಮಾಂಡ್ ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆಗೆ ತೀರ್ಮಾನಿಸಿದ್ದು ಕರ್ನಾಟಕದ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
4 Comments
автоматические карнизы для штор автоматические карнизы для штор .
вывод из запоя на дому ростов-на-дону вывод из запоя на дому ростов-на-дону .
пластиковые окна в сочи цены калькулятор пластиковые окна в сочи цены калькулятор .
семена почтой купить семена почтой купить .