Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯ ನಿವೃತ್ತಿ ಘೋಷಿಸಿದ ರಮೇಶ್ ಕುಮಾರ್ | Ramesh Kumar
    Trending

    ರಾಜಕೀಯ ನಿವೃತ್ತಿ ಘೋಷಿಸಿದ ರಮೇಶ್ ಕುಮಾರ್ | Ramesh Kumar

    vartha chakraBy vartha chakraApril 7, 202427 Comments2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1006,j:3111285580503282459,t:24040716
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.7- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲಕರ ಘಟ್ಟ ತಲುಪಿವೆ. ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡುವುದಿಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದರೆ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವುದಾಗಿ ಮಾಜಿ ಸಚಿವ ರಮೇಶ್ ಕುಮಾರ್ ಘೋಷಿಸಿದ್ದಾರೆ.
    ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಚಿವ ಮುನಿಯಪ್ಪ ಬಣ ಮತ್ತು ಮಾಜಿ ಸಚಿವ ರಮೇಶ್ ಕುಮಾರ್ ಬಣದ ನಡುವಿನ ಪ್ರತಿಷ್ಠೆ ಮತ್ತು ಹಗ್ಗ ಜಗ್ಗಾಟ ದೆಹಲಿಯ ಅಂಗಳವನ್ನು ತಲುಪಿತ್ತು. ಈ ಇಬ್ಬರು ನಾಯಕರ ಜಟಾಪಟಿ ಹೈಕಮಾಂಡ್ ಗೆ ತಲೆನೋವು ತಂದೊಡ್ಡಿದೆ.

    ಇದೀಗ ಮುಂಬರುವ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿನಾಗುತ್ತೇನೆ ಎಂದು ರಮೇಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.
    ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ ಎಂದು ತಿಳಿಸಿದರು.
    ಹಣ ಪಡೆದು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ನನೆಗೆ ಮೋಸ ಮಾಡಿ ಸೋಲಿಸಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ಅವರು ಸರ್ವನಾಶವಾಗುತ್ತಾರೆ. ಆದರೆ ತಾನು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಿಸಿದರು.
    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ. ರಮೇಶ್ ಕುಮಾರ್ ಉತ್ತರಾಧಿಕಾರಿಯಾಗಿ ನನ್ನ ಮಗ ಹರ್ಷ ಕೂಡ ಮತ ಕೇಳಲು ಬರುವುದಿಲ್ಲ. ಕಳೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಕೆಲಸ ಮಾಡಿದ ಕಾಂಗ್ರೆಸ್ ನಾಯಕರಿಗೆ ಯಾವ ಗತಿ ಬರಲಿದೆ ಎಂದು ಕಾದು ನೋಡಿ ಎಂದು ಮತದಾರರಿಗೆ ಹೇಳಿದರು.

    ಚಿಕ್ಕಬಳ್ಳಾಪುರಕ್ಕೆ ಶಿಫ್ಟ್:
    ಮತ್ತೊಂದೆಡೆ ಆಹಾರ ಸಚಿವ ಮುನಿಯಪ್ಪ ಅವರು ತಾವು ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವುದಿಲ್ಲ, ಪ್ರಚಾರ ಮಾಡುವಂತೆ ತಮಗೆ ಯಾರೂ ಕೂಡ ಆಹ್ವಾನ ನೀಡಿಲ್ಲ ಎಂದು ಹೇಳಿದರು.
    ಮತದಾರರು ಕೋಲಾರ ಜಿಲ್ಲೆಯಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾಮಗಾರಿಯನ್ನು ಗಮನಿಸಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ಹಾಕಲಿ ಎಂದು ಹೇಳಿದ ಅವರು ಕೆಲವು ನಾಯಕರು ಕೋಲಾರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳಿದ್ದಾರೆ ಅವರು ಗೆಲ್ಲಿಸಿ ಕೊಂಡು ಬರಲಿ ಎಂದು ಆಶಿಸುತ್ತೇನೆ ಎಂದರು.
    ನಿನ್ನ ಕುರುಡು ಮಲೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಗೆ ತಮಗೆ ಯಾವುದೇ ಆಹ್ವಾನ ನೀಡಿರಲಿಲ್ಲ ಹೀಗಾಗಿ ತಾವು ಆ ಸಭೆಗೆ ಹೋಗಿಲ್ಲ ಅಲ್ಲದೆ ನನಗೆ ನೆರೆಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ ಹೀಗಾಗಿ ಅಲ್ಲಿ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗುತ್ತೇನೆ ಎಂದರು.
    ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿಕೊಂಡು ಬರುವುದು ನನ್ನ ಜವಾಬ್ದಾರಿ ಹೈಕಮಾಂಡ್ ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    m ಕಾಂಗ್ರೆಸ್ Election ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದ ಭವಿಷ್ಯ ಬರೆಯಲಿರುವ ಕರ್ನಾಟಕ ರಾಜಕಾರಣ | Karnataka Politics
    Next Article ಕಾಂಗ್ರೆಸ್ ಗೆಲುವಿಗೆ ಕೈಯಲ್ಲಿ ಕರ್ಪೂರದಾರತಿ | Hassan
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on Crypto ವಂಚಕ Arrest.
    • mine_rbSa on ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    • RicardoCor on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.