ಬೆಂಗಳೂರು,ಜು.17 :
ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಮತ್ತು ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕಾಲ್ತುಳಿತ ಪ್ರಕರಣ ಕುರಿತಂತೆ ತನಿಖೆ ನಡೆಸಲು ನೇಮಿಸಲಾಗಿದ್ದ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕ ಸದಸ್ಯ ಆಯೋಗದ ಶಿಫಾರಸುಗಳನ್ನು ಆಧರಿಸಿ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಆಯೋಗದ ಶಿಫಾರಸುಗಳ ಬಗ್ಗೆ ಸಂಪುಟ ಸಭೆಯಲ್ಲಿ ಸುಧೀರ್ಘ ಸಮಾಲೋಚನೆ ನಡೆಸಲಾಯಿತು. ಕಾಲ್ತುಳಿತ ಘಟನೆಗೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಮತ್ತು ಆರ್ ಸಿ ಬಿ ನೇರ ಕಾರಣ ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಕೂಡ ಎದ್ದು ಕಾಣುತ್ತಿದೆ ಎಂದು ತಿಳಿಸಲಾಗಿದೆ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಈಗಾಗಲೇ ಪೊಲೀಸರ ವಿರುದ್ಧ ಕ್ರಮ ಜರುಗಿಸಲಾಗಿದೆ ಉಳಿದಂತೆ ಆರ್ ಸಿ ಬಿ ಮತ್ತು ಕೆಎಸ್‌ಸಿಎ ವಿರುದ್ಧ ಕ್ರಮ ಜರುಗಿಸುವುದು ಬಾಕಿ ಇದೆ ಎಂದು ಚರ್ಚಿಸಿದ ಸಂಪುಟ ಸಭೆ ಅಂತಿಮವಾಗಿ ಈ ಎರಡು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮುಖದ ಮೇಲೆ ದಾಖಲಿಸಲು ನಿರ್ಧರಿಸಿದೆ.
ಮೊಟ್ಟ ಮೊದಲ ಬಾರಿಗೆ ಐಪಿಎಲ್ ಟೂರ್ನಿ ಗೆದ್ದ ಆರ್ ಸಿ ಬಿ ಇದನ್ನು ಅದ್ದೂರಿಯಾಗಿ ಸಂಭ್ರಮಿಸಲು ತೀರ್ಮಾನಿಸಿತ್ತು ಅದರಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸಲು ತೀರ್ಮಾನಿಸಿ ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸದೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಯಿತು ಆರ್‌ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ವಿಜಯೋತ್ಸವದಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಿದರು ಅಲ್ಲದೆ ಈ ವಿಜಯೋತ್ಸವ ಸಮಾರಂಭ ವೀಕ್ಷಣೆಗೆ ಉಚಿತವಾಗಿ ಅವಕಾಶ ನೀಡಲಾಗುವುದು ಎಂದು ಹೇಳಿದ್ದು ದೊಡ್ಡ ಪ್ರಮಾಣದಲ್ಲಿ ಜನರು ಸೇರಲು ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅತ್ಯಧಿಕ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ ಎಂಬ ನಿರೀಕ್ಷೆ ಇದ್ದರೂ ಕೂಡ ಸಂಬಂಧ ಪಟ್ಟವರ ಜೊತೆ ಚರ್ಚಿಸದೆ ಏಕ ಪಕ್ಷಿಯವಾಗಿ ಆರ್ ಸಿ ಬಿ ಮತ್ತು ಕೆ ಎಸ್ ಸಿ ಎ ಕೈಗೊಂಡ ನಿರ್ಧಾರ ಅವಘಡಕ್ಕೆ ಕಾರಣವಾಯಿತು ಪೊಲೀಸರು ಕೂಡ ಏನು ಮಾಡಲಾಗದೆ ಅಸಹಾಯಕರಾಗಿ ನಿಲ್ಲುವಂತಾಯಿತು ಎಂದು ಹೇಳಿರುವ ಅಂಶವನ್ನು ಸಂಪುಟ ಸಭೆ ಗಂಭೀರವಾಗಿ ಪರಿಗಣಿಸಿದೆ