ಬೆಂಗಳೂರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಎಂದು ಹೇಳಿದರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ರಾಜ್ಯ ನಾಯಕರು ಸೃಷ್ಟಿಸಿಕೊಂಡಿರುವ ಬಿಕ್ಕಟ್ಟು ಹೀಗಾಗಿ ಅವರೇ ಅದನ್ನು ಬಗೆಹರಿಸಿಕೊಳ್ಳಬೇಕು ಎನ್ನುತ್ತಿದ್ದಾರೆ.
ಇದರ ನಡುವೆ ಈ ವಿಚಾರವಾಗಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಕುತೂಹಲದ ವಿಷಯವಾಗಿದೆ.
ಆದರೆ ಈ ವಿಚಾರವಾಗಿ ರಾಹುಲ್ ಗಾಂಧಿ ಇಲ್ಲಿಯವರೆಗೆ ತಮ್ಮ ಅಭಿಪ್ರಾಯ ತಿಳಿಸಿಲ್ಲ. ಅಷ್ಟೇ ಅಲ್ಲ ಈ ಕುರಿತಂತೆ ಇಲ್ಲಿಯವರೆಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಮಾತನಾಡಿಲ್ಲ ರಾಹುಲ್ ಗಾಂಧಿ ಅವರ ಜೊತೆ ಮಾತನಾಡಬೇಕು ಎಂದು ಡಿಕೆ ಶಿವಕುಮಾರ್ ಅವರು ಬಯಸಿದರೂ ಅದು ಇಲ್ಲಿಯವರೆಗೆ ಸಾಧ್ಯವಾಗಿಲ್ಲ ಒಂದಲ್ಲ ಒಂದು ಕಾರಣಗಳನ್ನು ಹೇಳಿ ರಾಹುಲ್ ಗಾಂಧಿ ಈ ಭೇಟಿಯನ್ನು ನಿರಾಕರಿಸುತ್ತಿದ್ದಾರೆ ಇದನ್ನು ನೋಡಿಯೇ ಈಗ ಡಿಕೆ ಶಿವಕುಮಾರ್ ತಾವು ರಾಹುಲ್ ಗಾಂಧಿ ಅವರಿಗೆ ಕಷ್ಟ ಕೊಡಲು ಬಯಸುವುದಿಲ್ಲ ಎಂದಿದ್ದಾರೆ.
ಹಾಗಾದರೆ ವಾಸ್ತವವಾಗಿ ರಾಹುಲ್ ಗಾಂಧಿ ಯಾಕೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತಿಲ್ಲ ಎನ್ನುವುದು ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ ರಾಹುಲ್ ಗಾಂಧಿ ಆಪ್ತ ವಲಯಗಳ ಪ್ರಕಾರ ಅಧಿಕಾರ ಹಸ್ತಾಂತರ ಕುರಿತಾಗಿ ರಾಹುಲ್ ಗಾಂಧಿ ಯಾವುದೇ ತೀರ್ಮಾನ ತೆಗೆದುಕೊಂಡರೂ ಕೂಡ ಅದು ರಾಜ್ಯ ಕಾಂಗ್ರೆಸ್ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಹೀಗಾಗಿ ಅವರು ಉದ್ದೇಶಪೂರ್ವಕವಾಗಿ ಈ ಬೆಳವಣಿಗೆಯಿಂದ ದೂರ ಉಳಿಯಲು ಬಯಸುತ್ತಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಹಾಗೂ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಜನಾಕರ್ಷಣೆ ಹೊಂದಿರುವ ವ್ಯಕ್ತಿ ಹೀಗಾಗಿ ಇವರು ಕಾಂಗ್ರೆಸ್ಸಿಗೆ ಅನಿವಾರ್ಯ ಅದೇ ರೀತಿ ಡಿಕೆ ಶಿವಕುಮಾರ್ ಸಂಘಟನಾ ಚತುರ ಪಕ್ಷದ ವಿಷಯಕ್ಕೆ ಬಂದರೆ ಯಾವುದೇ ತ್ಯಾಗ ಮತ್ತು ಹೋರಾಟಕ್ಕೂ ಸಿದ್ಧ ಎಂಬುದನ್ನು ಹಲವು ಬಾರಿ ಸಾಬೀತುಪಡಿಸಿದ್ದಾರೆ. ಪಕ್ಷ ಸಂಕಷ್ಟದಲ್ಲಿರುವ ಸಮಯದಲ್ಲಿ ಅದರ ನೆರವಿಗೆ ಧಾವಿಸುವ ಮೂಲಕ ತಾವೇ ತೊಂದರೆಗೆ ಸಿಲುಕಿಕೊಂಡಿದ್ದಾರೆ ಆದರೂ ಕೂಡ ಪಕ್ಷದ ಪರವಾಗಿ ನಿಲ್ಲುವುದನ್ನು ಬಿಟ್ಟಿಲ್ಲ ಹೀಗಾಗಿ ಇವರು ಕೂಡ ಕಾಂಗ್ರೆಸಿಗೆ ಅನಿವಾರ್ಯ ಹೀಗಾಗಿ ಯಾವುದೇ ತೀರ್ಮಾನ ತೆಗೆದುಕೊಂಡರು ಅದು ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಭಾವಿಸಿರುವ ರಾಹುಲ್ ಗಾಂಧಿ ಉದ್ದೇಶಪೂರ್ವಕವಾಗಿ ಈ ಬೆಳವಣಿಗೆಯಿಂದ ಅಂತರ ಕಾಯ್ದುಕೊಳ್ಳಲು ಬಯಸಿದ್ದಾರೆ ಹೀಗಾಗಿ ಈ ವಿಚಾರದ ಕುರಿತಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಬಯಸುತ್ತಿಲ್ಲ ಎನ್ನಲಾಗಿದೆ.
ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
Previous Articleಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
Next Article ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!


3 Comments
SteadyMeds pharmacy: SteadyMeds – canada pharmacy 24h
AccessBridge Pharmacy: mexican medicine – AccessBridge
express scripts mail order pharmacy: FormuLine Pharmacy – worldwide pharmacy