ನವೆದಹಲಿ/ ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಿಸಲಾಗಿದೆ.
ಖ್ಯಾತ ಗಾಯಕ ಸಿಧು ಮೂಸೆವಾಲ ಹತ್ಯೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ ವ್ಯಕ್ತವಾಗಿರುವುದೂ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಿಸಲು ಕಾರಣ ಎನ್ನಲಾಗಿದೆ.
ಬಿಷ್ಣೋಯ್ ಈಗ ತಿಹಾರ್ ಜೈಲಿನಲ್ಲಿದ್ದಾರೆ. ನಾವು ಸಲ್ಮಾನ್ ಖಾನ್ ಒಟ್ಟಾರೆ ಭದ್ರತೆಯನ್ನು ಹೆಚ್ಚಿಸಿದ್ದೇವೆ. ರಾಜಸ್ಥಾನದ ಗ್ಯಾಂಗ್ನಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅವರ ಅಪಾರ್ಟ್ಮೆಂಟ್ ಸುತ್ತ ಪೊಲೀಸ್ ಭದ್ರತೆ ಹಾಕಲಾಗಿದೆ ಎಂದು ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಆಗ ಬಿಷ್ಣೋಯ್, ಸಲ್ಮಾನ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ವರದಿಯಾಗಿತ್ತು. ಲಾರೆನ್ಸ್ ಬಿಷ್ಣೋಯ್ ಸಮುದಾಯಕ್ಕೆ ಸೇರಿದವರು. ಬಿಷ್ಣೋಯ್ ಸಮುದಾಯವು ಕೃಷ್ಣಮೃಗವನ್ನು ಪವಿತ್ರ ಜೀವಿ ಎಂದು ಪರಿಗಣಿಸಿದೆ. ಹಾಗಾಗಿ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
2008ರಲ್ಲಿ ಬಿಷ್ಣೋಯ್, ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಜೋಧ್ ಪುರ ನ್ಯಾಯಾಲಯದ ಹೊರಗೆ ಕೊಲ್ಲುವುದಾಗಿ ಹೇಳಿದ್ದರು. ನಾವು ಕ್ರಮ ಕೈಗೊಂಡರೆ ಎಲ್ಲರಿಗೂ ಗೊತ್ತಾಗುತ್ತದೆ. ನಾನು ಸದ್ಯಕ್ಕೆ ಏನನ್ನೂ ಮಾಡಿಲ್ಲ. ಯಾವುದೇ ಕಾರಣವಿಲ್ಲದೇ ನನ್ನ ಮೇಲೆ ಅಪರಾಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದರು.
2020ರಲ್ಲಿ ಜೈಲು ಸೇರಿದ ಬಿಷ್ಣೋಯ್ ನಿಕಟವರ್ತಿ ರಾಹುಲ್ ಅಲಿಯಾನ್ ಸುನ್ನಿ, ಸಲ್ಮಾನ್ ಖಾನ್ ಕೊಲೆಗೆ ಯೋಜನೆ ರೂಪಿಸಿದ್ದ ಎಂದು ಬಹಿರಂಗಪಡಿಸಿದ್ದ. ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿ ಮುಂಬೈ ಬಂದಿದ್ದ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಿಸಲಾಗಿದೆ.