ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ (66) ಭಾನುವಾರ ಮಧ್ಯರಾತ್ರಿ ವಿಧಿವಶರಾದರು. ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.
ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ.
Previous Articleದೇಶದಲ್ಲಿ ಕೊರೊನಾದ ಬಿಎ 4, ಬಿಎ 5 ತಳಿ ಪತ್ತೆ: ಕೇಂದ್ರ ಸರ್ಕಾರ ಘೋಷಣೆ
Next Article ಹಿಂದಿ ಮಾತನಾಡಿದ ಜಪಾನ್ ಬಾಲಕ: ವಾವ್ ಎಂದ ಮೋದಿ
