ಬಾಲಿವುಡ್ ನಟಿ ತಾಪ್ಸಿ ಪನ್ನು ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಡುಂಕಿ ಚಿತ್ರದಲ್ಲಿ ಶಾರುಖ್ ಖಾನ್ ಗೆ ತಾಪ್ಸಿ ನಾಯಕಿಯಾಗಿದ್ದಾರೆ. ರಾಜ್‌ಕುಮಾರ್ ಹಿರಾನಿ ಅವರು ಅಭಿಜಾತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಅವರೊಂದಿಗೆ ಚಿತ್ರಕಥೆ ಬರೆದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ತಾಪ್ಸಿ ಪನ್ನು, ಶಭಾಶ್ ಮಿಥು, ಸಿನಿಮಾದಲ್ಲಿ ಟೀಂ ಇಂಡಿಯಾ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಓಂ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
ಡುಂಕಿ ಮೂಲಕ ಮೊದಲ ಬಾರಿಗೆ ತೆರೆಗೆ ಮೇಲೆ ಶಾರುಖ್ ಖಾನ್ ಮತ್ತು ತಾಪ್ಸಿ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಸಹ ನಿರ್ಮಾಪಕಿಯಾಗಿ ಶಾರುಖ್ ಪತ್ನಿ ಗೌರಿ ಖಾನ್ ಸಾಥ್ ನೀಡಿದ್ದಾರೆ. ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಎರಡನೇ ಹಂತದ ಚಿತ್ರೀಕರಣ ಶೀಘ್ರ ಪ್ರಾರಂಭ ಆಗಲಿದೆ.
Previous Articleನಾಡ ಅಧಿದೇವತೆಗೆ ವಿಶೇಷ ಪೂಜೆ
Next Article ಆಷಾಢಮಾಸದ ಹಿನ್ನೆಲೆ ಟೈಟ್ ಸೆಕ್ಯುರಿಟಿ