Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Shettar ಗೆ Congress B-Form | Jagadish Shettar
    ರಾಜಕೀಯ

    Shettar ಗೆ Congress B-Form | Jagadish Shettar

    vartha chakraBy vartha chakraApril 17, 2023Updated:April 18, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಹುಬ್ಬಳ್ಳಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದರೂ, ಸ್ಪಂದಿಸದ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

    ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಶೆಟ್ಟರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಿ, ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಆಡಳಿತ ನಡೆಸಿದ ಉತ್ತಮ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಹೇಳಿದರು.

    ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಶೆಟ್ಟರ್ ಅವರಿಗೆ, ಬಿಜೆಪಿಯಲ್ಲಿ ಮುಜುಗರ ಉಂಟುಮಾಡುವ ಬೆಳವಣಿಗೆಗಳು ನಡೆದವು ನೇರ ನಡೆ-ನುಡಿಯ ನಾಯಕನಿಗೆ ಅಲ್ಲಿ ಉತ್ತಮ ಅವಕಾಶಗಳು ಸಿಗಲಿಲ್ಲ. ಜೀ,ಹುಜೂರ್, ಎನ್ನುವವರಿಗೆ ಮಾತ್ರ ಆ ಪಕ್ಷದಲ್ಲಿ ಅವಕಾಶ ಆಂತರಿಕ ಪ್ರಜಾಪ್ರಭುತ್ವ ಸಂಪೂರ್ಣ ಸತ್ತು ಹೋಗಿದೆ ಇಂಥ ಪಕ್ಷ ಮತ್ತು ನಾಯಕತ್ವದ ವಿರುದ್ಧ ಬೇಸರಗೊಂಡಿರುವ ಹಲವರು ಇದೀಗ ಮುಕ್ತ ಸ್ವಾತಂತ್ರ್ಯ ಮತ್ತು ಸಂಪೂರ್ಣ ಪ್ರಜಾತಂತ್ರ ವಾದಿ ಕಾಂಗ್ರೆಸ್ ಪಕ್ಷ ಸೇರಲು ಬರುತ್ತಿದ್ದಾರೆ ಎಂದು ಹೇಳಿದರು.

    BJP leader and Ex-Karnataka CM Jagadish Shettar joins Congress - Telangana  Today

    ಶೆಟ್ಟರ್‌ ಅವರು ಸಂಘ ಪರಿವಾರದ ಮೂಲದವರಾದರೂ ಯಾವತ್ತೂ ಕೂಡ ಜನವಿರೋಧಿಯಾಗಿ ನಡೆದುಕೊಳ್ಳಲಿಲ್ಲ. ಒಬ್ಬ ಸಜ್ಜನ ರಾಜಕಾರಣಿ. ಅವರ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಿದೆ. ಇದು ರಾಷ್ಟ್ರ ಮಟ್ಟದಲ್ಲೂ ಬದಲಾವಣೆಯ ದಿಕ್ಸೂಚಿ ಆಗಲಿದೆ ಎಂದು ಹೇಳಿದರು.
    ಸಿದ್ದರಾಮಯ್ಯ ಮಾತನಾಡಿ, ಶೆಟ್ಟರ್‌ ರಾಜ್ಯದ ಸ್ವಾಭಿಮಾನಿ ರಾಜಕಾರಣಿಗಳಲ್ಲಿ ಒಬ್ಬರು. ಅವರನ್ನು ಬಿಜೆಪಿ ನಾಯಕರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸ್ವಾಭಿಮಾನದ ಪ್ರಶ್ನೆಗಾಗಿಯೇ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದರು.

    ಶೆಟ್ಟರ್‌ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ದೊಡ್ಡ ಶಕ್ತಿ ಬಂದಿದೆ. ನಮ್ಮ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
    ಬಳಿಕ ಮಾತನಾಡಿದ ಶೆಟ್ಟರ್‌, ಜನಸಂಘ ಮತ್ತು ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಕುಟುಂಬ ನಮ್ಮದು. ನನ್ನ ತಂದೆ ಜನಸಂಘದಿಂದ ದಕ್ಷಿಣ ಭಾರತದಲ್ಲಿ ಮೊದಲ ಮೇಯರ್‌ ಆಗಿದ್ದರು. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ನಾನೂ ಒಬ್ಬ. ಆದರೆ, ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸುವ ಮೂಲಕ ಪಕ್ಷದ ಕೆಲವರು ನನಗೆ ಅವಮಾನ ಮಾಡಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂದಿರುವುದರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.

    ಲಿಂಗಾಯತ ಸಮುದಾಯದ ಹಿರಿಯ ರಾಜಕೀಯ ನಾಯಕರಲ್ಲಿ ನಾನೂ ಒಬ್ಬ. ಬಿ.ಎಸ್‌. ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗ ಬಿಜೆಪಿಯಲ್ಲಿ ಲಿಂಗಾಯತ ನಾಯಕರಲ್ಲಿ ನಾನೇ ಹಿರಿಯ. ಈ ಕಾರಣಕ್ಕಾಗಿಯೇ ಬಿಜೆಪಿಯ ಕೆಲವರು ನನ್ನನ್ನು ತುಳಿಯುವ ಪ್ರಯತ್ನ ಮಾಡಿದರು. ಬಿಜೆಪಿ ರಾಜ್ಯ ಘಟಕವು ಈಗ ಸಂಪೂರ್ಣವಾಗಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದಾಗಿಯೇ ನನ್ನಂತಹ ಹಿರಿಯರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    ಏಕೆ ನಮ್ಮನ್ನು ಈ ರೀತಿ ಅವಮಾನಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಬಿಜೆಪಿ ವರಿಷ್ಠರಿಂದ ಉತ್ತರ ಬಂದಿಲ್ಲ. ಸ್ವಾಭಿಮಾನವನ್ನು ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದೇನೆ. ಇದು ನನ್ನ ಹಾಗೂ ಕಾಂಗ್ರೆಸ್‌ ಪಕ್ಷದ ಪಾಲಿಗೆ ಹೊಸ ಅಧ್ಯಾಯ. ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಸಂಪೂರ್ಣವಾಗಿ ಶ್ರಮಿಸುತ್ತೇನೆ ಎಂದರು.

    ಇದಾದ ನಂತರ ಶೆಟ್ಟರ್‌ ಅವರಿಗೆ, ಹುಬ್ಬಳ್ಳಿ-ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ, ಕೆಪಿಸಿಸಿ‌ ಅಧ್ಯಕ್ಷ ಶಿವಕುಮಾರ್ ಬಿ ಫಾರ್ಮ್ ವಿತರಿಸಿದರು.

    Verbattle
    Verbattle
    Verbattle
    Congress Jagadish Shettar m ಕಾಂಗ್ರೆಸ್ Election ಧಾರವಾಡ ರಾಜಕೀಯ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleBJPಯಲ್ಲಿನ ಅಸಲಿ ಆಟದ ಕಥೆ
    Next Article ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scorebetDoIt on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • PedroSam on ಜೆಡಿಎಸ್ ಗೆ ಚಕ್ರ ಬೇಕಂತೆ!
    • Bnnrmoism on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.