ಬೆಂಗಳೂರು, ಜ.27- ಲೋಕಸಭೆ Election ಸನಿಹದಲ್ಲಿರುವಾಗ ಆರಂಭವಾಗಿರುವ ಪಕ್ಷಾಂತರ ಪರ್ವ ಹಾಗೂ ರಾಜ್ಯ ಕಾಂಗ್ರೆಸ್ ನಲ್ಲಿ ತಲ್ಲಣ್ಣ ಸೃಷ್ಟಿಸಿರುವ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿವಾದದ ಬೆನ್ನೆಲು ಗೃಹ ಸಚಿವ ಪರಮೇಶ್ವರ್ (G Parameshwara) ಅವರು ದಿಡೀರ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದ ನಿಗಮ ಮಂಡಗಳಿಗಳ ನೇಮಕಾತಿ ಪಟ್ಟಿ ಹೊರಬರುತ್ತಿದ್ದಂತೆ ಉಪಮುಖ್ಯಮಂತ್ರಿಯವರ ಮನೆಗೆ ದಿಢೀರ್ ಭೇಟಿ ನೀಡಿದ ಪರಮೇಶ್ವರ್ ಸುದೀರ್ಘ ಚರ್ಚೆ ನಡೆಸಿದ್ದಾರೆ ಆರಂಭದಿಂದಲೂ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಆಪ್ತ ಸ್ನೇಹಿತರಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರಿಂದ ಅಂತರ ಕಾಯ್ದುಕೊಂಡಿದ್ದರಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದರು.
ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ಸಿದ್ದರಾಮಯ್ಯ ಬಣ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಪ್ರಸ್ತಾಪ ಮಂಡಿಸಿತು. ಇದರಲ್ಲಿ ಪರಮೇಶ್ವರ್ ಅವರು ಪ್ರಧಾನ ಪಾತ್ರ ನಿರ್ವಹಿಸಿದ್ದರು.ಅದರಲ್ಲೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರ ನಿವಾಸಕ್ಕೆ ತೆರಳಿ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಮೂಲಕ ಗಮಗ ಸೆಳೆದಿದ್ದರು
ಈ ಹಿನ್ನೆಲೆಯಲ್ಲಿ ಶಿವಕುಮಾರ್ ಮತ್ತು ಅವರ ನಡುವಿನ ಸಂಬಂಧ ಹಳಸಿತ್ತು ಎನ್ನಲಾಗಿದೆ
ಈ ಬೆಳವಣಿಗೆಗಳ ನಡುವೆ ಮಧ್ಯಪ್ರವೇಶಿಸಿದ ಹೈಕಮಾಂಡ್ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಯಾರೂ ಮಾತನಾಡಬಾರದು ಲೋಕಸಭಾ ಚುನಾವಣೆ ಕಡೆ ಗಮನಹರಿಸುವಂತೆ ತಾಕೀತು ಮಾಡಿತ್ತು. ಇದರೊಂದಿಗೆ ಉಪ ಮುಖ್ಯಮಂತ್ರಿ ಹುದ್ದೆ ಕುರಿತಾದ ಚಟುವಟಿಕೆಗಳಿಗೆ ವಿರಾಮ ಬಿದ್ದಿದೆ.
ಇದರ ನಡುವೆ ಪರಮೇಶ್ವರ್ ಅವರು ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಿಗಮ ಮಂಡಳಿಗಳ ನೇಮಕಾತಿ ಅಷ್ಟೇ ಅಲ್ಲದೆ ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ, ಎಸ್.ಪಿ.ಮುದ್ದಹನುಮೇಗೌಡರ ಕಾಂಗ್ರೆಸ್ ಸೇರ್ಪಡೆ, ಬಿಟ್‍ಕಾಯಿನ್ ಹಗರಣದಲ್ಲಿ ಎಸ್‍ಐಟಿ ತನಿಖೆಯಲ್ಲಾಗಿರುವ ಬೆಳವಣಿಗೆ, ಪಿಎಸ್‍ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ವೀರಪ್ಪ ಅವರು ನೀಡಿರುವ ವರದಿಯಲ್ಲಿರುವ ಪ್ರಭಾವಿಗಳ ಹೆಸರುಗಳನ್ನೂ ಕೂಡ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ.