Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ
    ಚುನಾವಣೆ 2024

    ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ

    vartha chakraBy vartha chakraFebruary 21, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.21-

    ‘ಟಿಪ್ಪು ಸುಲ್ತಾನ್ (Tipu Sultan) ರೀತಿಯಲ್ಲಿ ನನ್ನನ್ನು ಹೊಡೆದು ಹಾಕುವಂತೆ ಕರೆ ಕೊಟ್ಟವರಿಗೆ ಧಮ್, ತಾಕತ್ತು ಇದ್ದರೆ ನನ್ನನ್ನು ಹೊಡೆದು ಹಾಕಲಿ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಸವಾಲು ಹಾಕಿದ್ದಾರೆ.

    ಪ್ರಸಕ್ತ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಇಂತಹ ಮಾತಿಗೆಲ್ಲ ಹೆದರಲ್ಲ. ತಾಕತ್ತು, ಧಮ್ ಇದ್ದರೆ ನನ್ನನ್ನು ಹೊಡೆದು ಹಾಕಿ’ ಎಂದರು.

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra), ‘ಈ ವಿಚಾರದ ಬಗ್ಗೆ ಈಗಾಗಲೇ ಚರ್ಚೆಯಾಗಿದೆ. ಅದನ್ನು ಅಲ್ಲಿಗೆ ಬಿಟ್ಟು ಈಗ ಬಜೆಟ್ ಬಗ್ಗೆ ಮಾತನಾಡಿ’ ಎಂದರು.

    ಇದರಿಂದ ಕೆರಳಿದ ಸಿದ್ದರಾಮಯ್ಯ, ‘ನೀವೊಬ್ಬ ಅಸಮರ್ಥ ಗೃಹ ಸಚಿವ. ಇಲಾಖೆಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ವ್ಯಕ್ತಿಯಾಗಿ ನೀವು ಒಳ್ಳೆಯವರು, ಆದರೆ ಇಲಾಖೆ ನಡೆಸಲು ಅಸಮರ್ಥರು’ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

    ಇದಕ್ಕೆ ತಿರುಗೇಟು ನೀಡಿದ ಆರಗ ಜ್ಞಾನೇಂದ್ರ, ‘ನಾನು ನಿಮಗಿಂತ ಚೆನ್ನಾಗಿ ಗೃಹ ಇಲಾಖೆ ನಡೆಸಿದ್ದೇನೆ’ ಎಂದು ತಮ್ಮನ್ನು ಸಮರ್ಥಿಸಿಕೊಂಡರು. ಅದಕ್ಕೆ ಸಿದ್ದರಾಮಯ್ಯನವರು, ‘ನೀವು ಸಮರ್ಥರಿದ್ದರೆ ಸಚಿವ ಅಶ್ವತ್ಥ್‌ನಾರಾಯಣ (Ashwathnarayan) ರವರ ಮೇಲೆ ಕೇಸು ಹಾಕಿ. ಧಮ್ ಇದ್ದರೆ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ’ ಎಂದು ಸವಾಲು ಹಾಕಿದರು.

    ‘ನೀವು ಏನೇ ಹೇಳಿದರೂ ನನ್ನ ನಿಲುವಿನಲ್ಲಿ, ಸಿದ್ಧಾಂತದಲ್ಲಿ ಬದಲಾವಣೆ ಇಲ್ಲ. ಹೊಡೆದು ಹಾಕಿ, ಸಿದ್ದರಾಮಯ್ಯನ್ನ ಮುಗಿಸಿ ಬಿಡಿ ಎಂದು ಹೇಳುವುದು ಆಡು ಭಾಷೆನಾ ಆರಗ ಜ್ಞಾನೇಂದ್ರರವರೇ?’ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದರು.

    ಸಿದ್ದರಾಮಯ್ಯನವರ ಮಾತಿಗೆ ಹಲವು Congress ಸದಸ್ಯರು ದನಿಗೂಡಿಸಿದರು. ಆಗ ಸದನದಲ್ಲಿ BJP ಹಾಗೂ Congress ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು.

    ‘ಸಚಿವ ಅಶ್ವತ್ಥ್‌ನಾರಾಯಣ ಮಾತನಾಡಿದ್ದು ಪ್ರಚೋದನೆ ಅಲ್ಲವೇ? ನಿಮ್ಮ ಇಲಾಖೆ ಸತ್ತು ಹೋಗಿದೆ. ಪ್ರಚೋದನಾಕಾರಿ ಭಾಷಣ ಮಾಡಿರುವ ಅಶ್ವತ್ಥ್‌ನಾರಾಯಣರವರ ಮೇಲೆ ಕೇಸು ಹಾಕಬೇಕು. ಆ ಧೈರ್ಯ ನಿಮಗೆ ಇದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

    ‘ಭಾವನಾತ್ಮಕ ವಿಚಾರ ಬಿಟ್ಟು ಬಿಡಿ, ಧರ್ಮದ ವಿಚಾರ ಬಿಟ್ಟು ಬಿಡಿ. ಅಬ್ಬಕ್ಕ ವರ್ಸಸ್ ಟಿಪ್ಪು, ಗಾಂಧಿ ವರ್ಸಸ್ ಗೋಡ್ಸೆ ಇದೆಲ್ಲಾ ಬೇಡ. ಇದೆಲ್ಲಾ ಅಪ್ರಸ್ತುತ. ಅಶ್ವತ್ಥ್‌ನಾರಾಯಣ ಅವರು ಹೊಡಿ, ಬಡಿ ಎಂದು ನೀಡಿರುವ ಹೇಳಿಕೆ ಯಾವ ಸಂಸ್ಕೃತಿ? ಹೊಡಿ ಬಡಿ ಎಂದು ಯಾವ ಧರ್ಮವೂ ಕೂಡಾ ಹೇಳಲ್ಲ. ಇದಕ್ಕೆಲ್ಲ ನಾನು ಜಗ್ಗುವವನಲ್ಲ, ಬಗ್ಗುವುದೂ ಇಲ್ಲ. ಈ ರೀತಿ ಮಾತನಾಡಿರುವುದು ಸಚಿವ ಅಶ್ವತ್ಥ್‌ನಾರಾಯಣರವರ ಬೌದ್ಧಿಕ ದಿವಾಳಿತನ. ಸೋಲುವ ಭಯ, ಹತಾಶೆಯಿಂದ ಈ ರೀತಿ ಮಾತನಾಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

    #aragajnanedra #BJP #Congress #siddaramaiah Ashwathnarayan Bangalore BJP Congress Elections 2023 Government Karnataka m Politics Tipu Sultan ಧರ್ಮ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleSindhuri – Roopa ಗೆ ವರ್ಗಾವಣೆ – ಮೌದ್ಗಿಲ್ ಎತ್ತಂಗಡಿ
    Next Article ಮೇದಾರ ಅಭಿವೃದ್ಧಿ ನಿಗಮ ಸ್ಥಾಪನೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://sknewstroy.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://sofiaposada.com.co/review-completa-de-balloon-juego-de-smartsoft-para-13/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fishezdpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe