Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    Trending

    ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah

    vartha chakraBy vartha chakraFebruary 2, 20248 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ. 02 – ಬರ ಪರಿಹಾರ ಮತ್ತು ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಫೆ.7ರಂದು ಪ್ರತಿಭಟನೆ ನಡೆಸಲಿದೆ.
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದರು.

    ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸುವ ಮೂಲಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.
    2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ ಎಂದು ಹೇಳಿದರು.

    ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ದೂರಿದರು.
    2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. . ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ.14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ವಿವರಿಸಿದರು.

    ನೀರಾವರಿ ಯೋಜನೆಯಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನು ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ ಎಂದರು.
    ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ ಎಂದು ಆಪಾದಿಸಿದರು.

    ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ ಎಂದರು.

    AI Government Karnataka m News Politics siddaramaiah ಕಾಂಗ್ರೆಸ್ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleI.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    Next Article ಪೂನಂಪಾಂಡೆ ಸತ್ತಿಲ್ಲ…ಮಾಡಿದ್ದೆಲ್ಲಾ ನಾಟಕ | Poonam Pandey
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    8 Comments

    1. situs slot gacor on November 27, 2025 2:20 pm

      slot gacor
      Lumino99 adalah sebuah situs slot gacor terpercaya yang hadir dengan teknologi modern dan fitur canggih seperti deposit QRIS super cepat serta RTP live yang selalu diperbarui setiap hari. Platform ini berhasil menarik perhatian para pemain dari berbagai kalangan—baik muda maupun dewasa—sebagai bentuk hiburan digital yang seru dan menguntungka

      Reply
    2. aviator_qeEn on December 6, 2025 12:04 am

      В казино aviator казино игроки могут наслаждаться захватывающими взлетами и множеством возможностей для выигрыша.
      Мнения опытных пользователей могут быть полезными при выборе стратегии.

      Reply
    3. aviator_xxMl on December 6, 2025 12:04 am

      Immerse yourself in the world of exciting betting with daman game aviator and try your luck!
      This aspect of the game keeps players on the edge of their seats, adding to the overall enjoyment.

      Reply
    4. kraken 24 on December 8, 2025 5:30 pm

      Криптографические технологии обеспечивают защищенный кракен через end-to-end шифрование всех коммуникаций, PGP защиту конфиденциальных данных и мультиподписные кошельки для средств.

      Reply
    5. nv-casino-992 on December 9, 2025 12:52 am

      Uwielbiasz hazard? nv casino promo code: rzetelne oceny kasyn, weryfikacja licencji oraz wybor bonusow i promocji dla nowych i powracajacych graczy. Szczegolowe recenzje, porownanie warunkow i rekomendacje dotyczace odpowiedzialnej gry.

      Reply
    6. kraken-850 on December 10, 2025 6:09 am

      Пошаговая инструкция описывает инструкция по входу на кракен с обязательной проверкой SSL сертификата, визуальной верификацией дизайна и тестированием функционала перед вводом данных.

      Reply
    7. мел бет букмекерская on December 11, 2025 6:31 pm

      mel bet
      Международный сервис Melbet
      обеспечивает
      максимальному набору
      предматчевых рынков
      и ставок, доступных во время матча,
      представляющих
      множество спортивных направлений
      — включая футбол, теннис
      до баскетбольных, хоккейных и киберспортивных лиг,
      а также виртуальных турниров.

      Помимо спорта,
      игрокам доступны
      лицензионные игровые автоматы,
      различные типы рулетки,
      блэкджек
      и телешоу-игры с живой студией.

      Новички могут активировать
      приветственный пакет,
      который включает
      дополнительный множитель на первый депозит
      и бесплатные вращения.

      Это помогает начать с расширенным балансом
      и протестировать дополнительные слоты.

      Для удобства
      Melbet предлагает
      надёжные мобильные версии,
      операторов, доступных всегда,
      а также
      вывод без длительных задержек
      без затягиваний.

      Так Melbet превращается в комплексное игровое пространство
      как для
      спортивного беттинга,
      так и для
      онлайн-гейминга.

      Reply
    8. playboy888_pfOn on December 13, 2025 1:34 am

      playboy888
      Many users around the world find Playboy888 to be an intriguing online destination.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_zvOl on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • kypit kyrsovyu_fcOn on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • fen daison_oiOt on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe