ಬೆಂಗಳೂರು, ಏ.14: ಲೋಕಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದರೂ, ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಇನ್ನೂ ಬಗೆ ಹರಿದಿಲ್ಲ.
ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದಿರುವ ಪ್ರಧಾನಿ ಮೋದಿ ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಾಲಿ ಸಂಸದ ಹಾಗೂ ಹಿರಿಯ ನಾಯಕ ವಿ ಶ್ರೀನಿವಾಸ ಪ್ರಸಾದ್ ಈ ಸಭೆಯಿಂದ ದೂರ ಉಳಿಯುವ ಮೂಲಕ ಗಮನ ಸೆಳೆದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿರುವ ಶ್ರೀನಿವಾಸ ಪ್ರಸಾದ್ ಅವರು ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು ಅಲ್ಲದೆ ತಮ್ಮ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಗೆ ಬಿಜೆಪಿ ನಾಯಕತ್ವ ಸೊಪ್ಪು ಹಾಕಿಲ್ಲ.
ಇದರಿಂದ ಅಸಮಾಧಾನಗೊಂಡಿರುವ ಅವರು ಪ್ರಧಾನಿ ಮೋದಿ ಅವರ ಸಭೆಯನ್ನು ಬಹಿಷ್ಕರಿಸುವ ಮೂಲಕ ನಾಯಕತ್ವಕ್ಕೆ ಸವಾಲು ಹಾಕಿದ್ದಾರೆ.
ಈಗಾಗಲೇ ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಬಹುತೇಕ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಪಕ್ಷದ ನಾಯಕತ್ವದ ವಿರುದ್ಧ ಶ್ರೀನಿವಾಸ್ ಪ್ರಸಾದ್ ಅವರು ಮುನಿಸಿಕೊಂಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶ್ರೀನಿವಾಸ ಪ್ರಸಾದ್ ಅವರ ಮನೆಗೆ ತೆರಳಿ ಅವರ ಜೊತೆ ಸುಧೀರ್ಘ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದರು.
ಆದರೆ ಶ್ರೀನಿವಾಸ ಪ್ರಸಾದ್ ಅವರು ಯಾವುದೇ ಕಾರಣಕ್ಕೂ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ಗೊತ್ತಾಗಿದೆ. ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದಾರೆ ಇಂತಹ ಸಮಯದಲ್ಲಿ ತಮ್ಮ ಗೈರು ಹಾಜರಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕೆಲವು ನಿಮಿಷಗಳ ಕಾಲವಾದರೂ ಅಲ್ಲಿಗೆ ಬಂದು ವೇದಿಕೆ ಹಂಚಿಕೊಂಡು ಹೋಗಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಸಾದ್ ಅವರು ತಾವು ಮೋದಿ ಅವರೊಂದಿಗೆ ಹಲವಾರು ಬಾರಿ ವೇದಿಕೆ ಹಂಚಿಕೊಂಡಿದ್ದೇನೆ. ಇದೇನು ಹೊಸದಲ್ಲ ಈಗ ತಮಗೆ ತೀವ್ರ ರೀತಿಯ ಅನಾರೋಗ್ಯ ಕಾಡುತ್ತಿದ್ದು ಅವರ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.


2 Comments
mgm 200 free bet betmgm-play betmgm ME
Immerse yourself in the atmosphere of a real casino from the comfort of your home. crown coins casino login offers a variety of games and fast payouts. Don’t miss the chance for a big jackpot!