ಕಲಬುರಗಿ, ಜೂ.3- ಜಿಲ್ಲೆಯ ಕಮಲಾಪುರದಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತದ ಬಗ್ಗೆ ಉನ್ನತ ತನಿಖೆಗೆ ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ತೆರಳಿದ್ದು, ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ. ಅವರ ವರದಿ ಬಂದ ನಂತರ ದುರಂತದ ಬಗ್ಗೆ ಮಾಹಿತಿ ಸಿಗಲಿದೆ ಎಂದರು.
ಈ ದುರಂತದಲ್ಲಿ 7 ಜನರು ಮರಣ ಹೊಂದಿರುವ ಮಾಹಿತಿ ಇದೆ. ಖಾಸಗಿ ಬಸ್‍ನಲ್ಲಿ 35 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತದ ಬಗ್ಗೆ ಉನ್ನತ ತನಿಖೆ
Previous Articleಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ
Next Article ಉಪೇಂದ್ರ ನಿರ್ದೇಶನದ, ನಟನೆಯ U ಸಿನೆಮ ಮುಹೂರ್ತ