ಬೆಂಗಳೂರು,ನ.29-
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪದ ವಿಷಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಶಾಲಾ ಪರೀಕ್ಷೆ ಮಂಡಳಿ ತೆರೆ ಎಳೆದಿದೆ. ಪ್ರಸಕ್ತ ವರ್ಷ ಸಂಪೂರ್ಣ ಭಿನ್ನವಾದ ಪ್ರಶ್ನೆ ಪತ್ರಿಕೆ ಇರಲಿದೆ ಎಂಬ ಚರ್ಚೆಗಳು ಆರಂಭಗೊಂಡಿರುವ ಬೆನ್ನಲ್ಲೇ ಇಂತಹ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ
ಪ್ರಸಕ್ತ ಸಾಲಿನ ಪ್ರಶ್ನೆ ಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್. ಅವರು ಸ್ಪಷ್ಟಪಡಿಸಿದ್ದಾರೆ
ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ ಸಮಿತಿಯು ನೀಡುವ ವರದಿಯಂತೆ ಕ್ರಮವಹಿಸಲಾಗುವುದು.ಹಾಗಾಗಿ ಪ್ರಸಕ್ತ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.
ಕಳೆದ ವರ್ಷದ ಶೈಕ್ಷಣಿಕ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ವಿಷಯವಾಗಿ ಕೆಲವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದ್ದಾರೆ.
Previous Articleಅಮೆರಿಕಾಕ್ಕೆ ಬಂದವೇ ಅನ್ಯಲೋಕದ ಜೀವಿಗಳು?
Next Article ಪಣಿ ಸಿನಿಮಾ ಗೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್