Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Fake ನ್ಯೂಸ್ Viral ತಡೆಗಟ್ಟಲೇಬೇಕು
    ಅಪರಾಧ

    Fake ನ್ಯೂಸ್ Viral ತಡೆಗಟ್ಟಲೇಬೇಕು

    vartha chakraBy vartha chakraJune 20, 202329 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.20- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
    ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗ ಈ ಬಗ್ಗೆ ವಿವರವಾಗಿ ಚರ್ಚಿಸಿದರು.
    2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಿದರು.
    ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಬೇಕು ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.
    ಮಕ್ಕಳ ಕಳ್ಳರು,ಗೋಮಾಂಸ ಸಾಗಿಸುವವರು…ಇತ್ಯಾದಿ ಹಲವಾರು ರೀತಿಯ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು.ಈಗಲೂ ಇಂತಹ ಶಕ್ತಿಗಳು ಸಕ್ರಿಯವಾಗಿ ಕೆಲಸ ಮಾಡಲು ಆರಂಭಿಸಿವೆ.ಇದರ ಮೇಲೆ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
    ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪು ಘರ್ಷಣೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
    ಫ್ಯಾಕ್ಟ್ ಚೆಕ್:
    ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ,ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    viral ಕಾಂಗ್ರೆಸ್ ಕಾನೂನು Election ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಬಂದ್ ಯಾಕೆ?-FKCCI ಪ್ರಶ್ನೆ
    Next Article KMF ಅಧ್ಯಕ್ಷ ಭೀಮಾನಾಯಕ್
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Eileennerty on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.