Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    Trending

    ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution

    vartha chakraBy vartha chakraAugust 23, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆಗಸ್ಟ್ 22: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.  ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಅವರು ಮಾತನಾಡಿದರು.

    15 ದಿನಗಲ್ಲಿ ವರದಿ

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

    ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

    ನಾಲ್ಕು ಇಲಾಖೆಗಳ ನಡುವೆ ಸಮನ್ವಯ

    ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಹಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

    ಟ್ಯಾಂಕ್ ಗಳ ಸ್ವಚ್ಛತಾ ಕಾರ್ಯ

    ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

    ನರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

    39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

    ಸ್ವಚ್ಛತೆಯ ಬಗ್ಗೆ ಜಾಗೃತಿ

    ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    Poll ಆರೋಗ್ಯ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru
    Next Article ISRO ವಿಜ್ಞಾನಿಗಳಿಗೆ ವಿಧಾನಸೌಧದಲ್ಲಿ ಸತ್ಕಾರ | S Somanath
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf on ಕೇರಳ ಗಡಿಯಲ್ಲಿ ಕರ್ನಾಟಕದ ನಕ್ಸಲ್ ‌ಬಂಧನ | Kerala
    • RicardoCor on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RicardoCor on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.