Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೂರಜ್ ರೇವಣ್ಣ ಎಸೆದ ರಾಜಕೀಯ ದಾಳ | Suraj Revanna
    ರಾಜಕೀಯ

    ಸೂರಜ್ ರೇವಣ್ಣ ಎಸೆದ ರಾಜಕೀಯ ದಾಳ | Suraj Revanna

    vartha chakraBy vartha chakraJanuary 30, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲಕರ ಘಟ್ಟ ತಲುಪಿವೆ.
    ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಿಸಬೇಕು ಎಂಬ ಉದ್ದೇಶದೊಂದಿಗೆ ಎನ್ ಡಿ ಎ ಮೈತ್ರಿಕೂಟ ಸೇರಿರುವ ಜೆಡಿಎಸ್ ತನಗೆ ಬೇಕಾಗಿರುವ ಲೋಕಸಭಾ ಕ್ಷೇತ್ರಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ಆರಂಭವಾಗಿದೆ.
    ಅದರಲ್ಲೂ ಜೆ ಡಿ ಎಸ್ ನ ಭದ್ರಕೋಟೆ ಎನಿಸಿರುವ ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಈಗಾಗಲೇ ಘೋಷಿಸಿದ್ದಾರೆ ಆದರೆ ಇದಕ್ಕೆ ಬಿಜೆಪಿಯ ಹಲವಾರು ಮುಖಂಡರು ಮತ್ತು ಜೆಡಿಎಸ್ ನ ಒಂದು ವರ್ಗ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

    ಗೆಲ್ಲುವ ಸಾಧ್ಯತೆ ಕುರಿತಂತೆ ಆಂತರಿಕ ವಲಯದಲ್ಲಿ ನಡೆಸಲಾಗಿರುವ ಸಮೀಕ್ಷೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾದ ಅಭಿಪ್ರಾಯ ವ್ಯಕ್ತವಾಗಿಲ್ಲ. ಅಲ್ಲದೆ ಜೆಡಿಎಸ್ ನ ಕಾರ್ಯಕರ್ತರ ದೊಡ್ಡ ಬಣ ಮತ್ತು ಬಹುತೇಕ ಬಿಜೆಪಿಯ ಎಲ್ಲ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ಆರಂಭಿಸಿದ್ದಾರೆ ಎಂದು ಗೊತ್ತಾಗಿದೆ. ಈ ಬೆಳವಣಿಗೆ ಮತ್ತೊಮ್ಮೆ ಈ ಜೆಡಿಎಸ್ ನ ದೊಡ್ಡ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸುವ ಸೂಚನೆ ನೀಡಿದೆ.
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹಾಸನ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಪ್ರಯತ್ನ ನಡೆಸಿದರಾದರು ಅದಕ್ಕೆ ಕುಮಾರಸ್ವಾಮಿ ಅವಕಾಶ ನೀಡಲಿಲ್ಲ. ಇದರ ವಿರುದ್ಧ ರೇವಣ್ಣ ಮತ್ತು ಭವಾನಿ ರೇವಣ್ಣ ಸಿಡಿದೆದ್ದರಾದರೂ ಅಂತಿಮವಾಗಿ ದೇವೇಗೌಡರ ಮಧ್ಯೆ ಪ್ರವೇಶದಿಂದ ಬಿಕ್ಕಟ್ಟು ಸುಖಾಂತ್ಯ ಕಂಡಿತ್ತು.

    ಈಗ ಲೋಕಸಭೆ ಚುನಾವಣೆ ಸನಿಹವಾಗುತ್ತಿದ್ದು ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲು ವೇದಿಕೆ ಸಜ್ಜುಗೊಳ್ಳುತ್ತಿದೆ. ಆದರೆ,ಇದೀಗ ಕುಮಾರಸ್ವಾಮಿ ಮತ್ತೆ ತಮ್ಮ ಕುಟುಂಬದ ವಿರುದ್ಧ ಇದ್ದಾರೆ ಎಂದು ಭಾವಿಸಿರುವ ರೇವಣ್ಣ ಕುಟುಂಬ ಇದೀಗ ಕುಮಾರಸ್ವಾಮಿ ವಿರುದ್ಧ ತಿರುಗಿ ಬೀಳಲು ಸಜ್ಜುಗೊಳ್ಳುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಒಂದು ವೇಳೆ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನಿರಾಕರಿಸಿದ್ದೆ ಆದಲ್ಲಿ ಅವರು ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ ಎಂದು ಗೊತ್ತಾಗಿದೆ ಈ ನಿಟ್ಟಿನಲ್ಲಿ ಎಚ್ ಡಿ ರೇವಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸದಸ್ಯ ಸೂರಜ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
    ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಸುದೀರ್ಘ ಕಾಲ ಮಾತುಕತೆ ನಡೆಸಿರುವುದು ಹಲವಾರು ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಸೂರಜ್ ಅವರು ತಮ್ಮ ಕುಟುಂಬ ಕಾಂಗ್ರೆಸ್ ಸೇರಲು ಸಿದ್ಧವಿದೆ ಎಂಬ ಮಾಹಿತಿ ರವಾನಿಸಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ ಈ ಭೇಟಿಯ ಮೂಲಕ ಕುಮಾರಸ್ವಾಮಿ ಅವರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ ಎನ್ನಲಾಗುತ್ತಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ.

    Verbattle
    Verbattle
    Verbattle
    News Politics revanna suraj revanna Trending ಕಾಂಗ್ರೆಸ್ Election ಡಿ.ಕೆ ಶಿವಕುಮಾರ್ ನರೇಂದ್ರ ಮೋದಿ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    Next Article ನಿರುದ್ಯೋಗಿಗಳಿಂದ ಪೀಕಿದ್ದು158 ಕೋಟಿ | Fraud
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_nkKr on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • LeonardReawn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • LinwoodGah on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.